Saturday, 10th May 2025

SBI Recruitment 2025: ಪದವೀಧರರಿಗೆ ಗುಡ್‌ನ್ಯೂಸ್‌; SBIಯ 600 ಪ್ರೊಬೆಷನರಿ ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಗುಡ್‌ನ್ಯೂಸ್‌. ಸರ್ಕಾರಿ ಸ್ವಾಮ್ಯದ ದೇಶದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India) ಖಾಲಿ ಇರುವ ಬರೋಬ್ಬರಿ 600 ಪ್ರೊಬೆಷನರಿ ಆಫೀಸರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SBI Recruitment 2025). ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ 2025ರ ಜ. 16 (Job Guide).

ವಿದ್ಯಾರ್ಹತೆ ಮತ್ತು ವಯೋಮಿತಿ

ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ/ಒಬಿಸಿ/ಇಡಬ್ಲ್ಯುಎಸ್‌ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್‌.

ಆಯ್ಕೆ ವಿಧಾನ

ಪ್ರಿಲಿಮಿನರಿ ಪರೀಕ್ಷೆ, ಮೈನ್‌ ಪರೀಕ್ಷೆ, ಸೈಕೋಮ್ಯಾಟ್ರಿಕ್‌ ಟೆಸ್ಟ್‌ (Psychometric Test), ಗ್ರೂಪ್‌ ಡಿಸ್ಕಷನ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 48,480 ರೂ. – 85,920 ರೂ. ಮಾಸಿಕ ವೇತನ ದೊರೆಯಲಿದೆ. ಅಭ್ಯರ್ಥಿಗಳನ್ನು 3 ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಿಲಿಮಿನರಿ ಪರೀಕ್ಷೆಯು ಇಂಗ್ಲಿಷ್‌, ಕ್ವಾಂಟಿಟೇಟಿವ್‌ ಅಪ್ಟಿಟ್ಯೂಡ್‌, ರೀಸನಿಂಗ್‌ ಎಬಿಲಿಟಿ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. 100 ಅಂಕಗಳ ಈ ಪರೀಕ್ಷೆಯ ಅವಧಿ 1 ಗಂಟೆ. ಇನ್ನು ಮೈನ್‌ ಪರೀಕ್ಷೆ ರೀಸನಿಂಗ್‌ & ಕಂಪ್ಯೂಟರ್‌ ಅಪ್ಟಿಡ್ಯೂಡ್‌, ಡಾಟಾ ಅನಾಲಿಸಿಸ್‌ & ಇಂಟರ್‌ಪ್ರೆಟೇಷನ್‌, ಜನರಲ್‌ ಅವೆರ್‌ನೆಸ್‌/ಎಕಾನಮಿ/ಬ್ಯಾಂಕಿಂಗ್‌ ನಾಲೆಡ್ಜ್‌, ಇಂಗ್ಲಿಷ್‌ ಮತ್ತು ಕಮ್ಯುನಿಕೇಷನ್‌ ಸ್ಕಿಲ್ಸ್‌: ಇಮೇಲ್‌, ರಿಪೋರ್ಟ್‌, ಸಿಚುವೇಷನ್‌ ಅನಾಲಿಸಿಸ್‌ & ಪ್ರಿಸಿಸ್‌ ರೈಟಿಂಗ್‌ ಒಳಗೊಂಡಿದೆ.

SBI Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
    (https://ibpsonline.ibps.in/sbiponov24/)
  • ಹೆಸರು ನೋಂದಾಯಿಸಿ.
  • ಎಚ್ಚರಿಕೆಯಿಂದ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಸರಿಯಾದ ಅಳತೆಯಲ್ಲಿ ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಎಸ್‌ಬಿಐಯ ಅಧಿಕೃತ ವೆಬ್‌ಸೈಟ್‌ ವಿಳಾಸ: sbi.co.inಗೆ ಭೇಟಿ ನೀಡಿ ಅಥವಾ ದೂರವಾಣಿ 022-22820427ಕ್ಕೆ ಕರೆ ಮಾಡಿ.

ಈ ಸುದ್ದಿಯನ್ನೂ ಓದಿ: SBI Recruitment 2025: ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; SBIನಲ್ಲಿದೆ ಬರೋಬ್ಬರಿ 13 ಸಾವಿರ ಹುದ್ದೆ: ಹೀಗೆ ಅಪ್ಲೈ ಮಾಡಿ