Saturday, 17th May 2025

Chikkaballapur News: ಶ್ರೀ ಅಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಂಡಲ ಪೂಜಾ ವಿಶೇಷ ಕಾರ್ಯಕ್ರಮ

ಬಾಗೇಪಲ್ಲಿ: ಶ್ರೀ ಅಯಪ್ಪ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಸೇವಾ ಟ್ರಸ್ಟ್  ವತಿಯಿಂದ ಶನಿವಾರ ಮಂಡಲ ಪೂಜಾ ವಿಶೇಷ ಕಾರ್ಯಕ್ರಮ ಅತ್ಯಂತ ಶ್ರದ್ಧಾ-ಭಕ್ತಿ ಸಂಭ್ರಮದಿಂದ ನೆರವೇರಿತು

ಮಂಡಲ ಪೂಜಾ ವಿಶೇಷ ಕಾರ್ಯಕ್ರಮದ ಪ್ರಯುಕ್ತ ದೇಗುಲದ ಶ್ರೀ ಅಯ್ಯಪ್ಪ ಸ್ವಾಮಿ ಮೂರ್ತಿಗೆ ಕಳಾಶಾಭಿಷೇಕ ಅಷ್ಟಾಭಿಷೇಕ, ವಿಶೇಷ ಅಲಂಕಾರ ಗೈದು ಪೂಜೆಯನ್ನು ಪ್ರಧಾನ ಆರ್ಚಕರು  ವಿಶೇಷ ಪೂಜೆವನ್ನು ನೆರವೇರಿಸಿ ದರು. ಅಯ್ಯಪ್ಪ ಮಾಲಾಧಾರಿಗಳು ಸೇರಿದಂತೆ ಸಹಸ್ರಾರು ಭಕ್ತರು, ಬೆಳಿಗ್ಗೆಯಿಂದ ಅಯ್ಯಪ್ಪ ದೇವಸ್ಥಾನಕ್ಕೆ ಆಗಮಿಸಿ, ದೇವರ ದರ್ಶನ ಪಡೆದರು. ಹೂ-ಹಣ್ಣು, ಕಾಣಿಕೆ ಸಲ್ಲಿಸಿ ಭಕ್ತಿ ಮೆರೆದರು. ಬಳಿಕ ನಡೆದ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಸಹಸ್ರಾರು ಭಕ್ತರು ಪ್ರಸಾದ ಸ್ವೀಕರಿಸಿದರು.

ಶ್ರೀ ಅಯಪ್ಪ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಸೇವಾ ಟ್ರಸ್ಟ್  ವತಿಯಿಂದ ಮೂರು ದಿನಗಳ ಕಾಲ ನಾನಾ ಧಾರ್ಮಿಕ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು ಶನಿವಾರ ಶ್ರೀ ಅಯ್ಯಪ್ಪ ಸ್ವಾಮಿ ಪಲ್ಲಕ್ಕಿ, ೨೯ ರ ಭಾನುವಾರ ಅಯ್ಯಪ್ಪ ಸ್ವಾಮಿ ಹರಿಕಥೆ,೩೦ ರ ಸೋಮವಾರ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಅನ್ನದಾನ ಕಾರ್ಯಕ್ರಮ ಇರುತ್ತದೆ ಎಂದು ಸಮಿತಿ ತಿಳಿಸಿದೆ.

ಮೆರವಣಿಗೆ: ಮಂಡಲ ಪೂಜಾ ವಿಶೇಷ ಕಾರ್ಯಕ್ರಮದ ಪ್ರಯುಕ್ತ ಅಯ್ಯಪ್ಪ ಸ್ವಾಮಿಯ ಮೂರ್ತಿಯ ನಗರದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಯಿತು. ದಾರಿಯುದಕ್ಕೂ ಅಯ್ಯಪ್ಪ ಮಾಲಾಧಾರಿಗಳು, ಭಕ್ತರು ಅಯ್ಯಪ್ಪ ಸ್ವಾಮಿ ಭಜನೆ ಗೀತೆಗಳನ್ನು ಹಾಡಿ ಹೆಜ್ಜೆ ಹಾಕಿದರು.

ಬಾಗೇಪಲ್ಲಿ ಪಟ್ಟಣದ ಬಯಲು ಆಂಜನೇಯ ಸ್ವಾಮಿ ದೇವಸ್ಥಾನದಿಂದ ಆರಂಭವಾದ ಮೆರವಣಿಗೆ ಗೂಳೂರು ವೃತ್ತ, ಪುರಸಭೆ, ಬಸ್ಸು ನಿಲ್ದಾಣ ಸೇರಿದಂತೆ ಪ್ರಮುಖ ರಸ್ತೆಗಳ ಮೂಲಕ ದೇವಸ್ಥಾನದಲ್ಲಿ ಸಂಪನ್ನಗೊAಡಿತು.

ರಾತ್ರಿ ಅಯಸ್ವಾಮಿಸ್ವಾಮಿಗೆ ಮಹಾಮಂಗಳಾರತಿ, ಭಸ್ಮಾಭಿಷೇಕ ಗೈದು ವಿಶೇಷ ಪೂಜೆ ಸಲ್ಲಿಸಿ, ಹರಿವಾರಸಾನಂ ಗೀತೆ ಹಾಡಿದರು.