ಲಖನೌ: ಉತ್ತರ ಪ್ರದೇಶದ (Uttar Pradesh) ಔರೈಯಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ತಂದೆ, ಚಿಕ್ಕಪ್ಪ, ಅಜ್ಜ ನಿರಂತರ ಅತ್ಯಾಚಾರ (Physical Abuse) ನಡೆಸಿದ್ದಾರೆ. ಆಕೆ ಇದೀಗ ಗರ್ಭಿಣಿಯಾಗಿದ್ದು, ಬಾಲಕಿಯ ಆಕೆಯ ಅಜ್ಜ, ತಂದೆ ಮತ್ತು ಚಿಕ್ಕಪ್ಪನನ್ನು ಬಿಧುನಾ ಪೊಲೀಸರು ಬಂಧಿಸಿದ್ದಾರೆ(UP Horror). ಔರೈಯಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್ಪಿ) ಅಲೋಕ್ ಮಿಶ್ರಾ ಅವರು ಶುಕ್ರವಾರ ಮಹಿಳಾ ಸಂಬಂಧಿಯೊಂದಿಗೆ ಹುಡುಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದು, ನಂತರ ಎಫ್ಐಆರ್ ದಾಖಲಿಸಿ ತನಿಖೆ ಪ್ರಾರಂಭಿಸಲಾಗಿದೆ ಎಂದು ಹೇಳಿದರು.
‘ಕಳೆದ ಹಲವು ತಿಂಗಳುಗಳಿಂದ ತನ್ನ ಅಜ್ಜ, ತಂದೆ ಮತ್ತು ಚಿಕ್ಕಪ್ಪ ತನ್ನ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪ್ರಾಥಮಿಕವಾಗಿ ಆಕೆ ಎರಡು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (ಎಫ್) (ಸಂಬಂಧಿ ಅಥವಾ ಪೋಷಕರಿಂದ ಅತ್ಯಾಚಾರ), 65 (1) (16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ), 232 (ಸುಳ್ಳು ಸಾಕ್ಷ್ಯವನ್ನು ನೀಡುವಂತೆ ವ್ಯಕ್ತಿಯನ್ನು ಬೆದರಿಸುವುದು) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಇದೇ ಅಲ್ಲದೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯೂ ಆರೋಪಗಳನ್ನು ದಾಖಲಿಸಲಾಗಿದೆ ಎಂದರು. ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಹಾಗೂ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ. ಸಂತ್ರಸ್ತೆಯ ವಯಸ್ಸು ಸುಮಾರು 13 ವರ್ಷ ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ಟೋಬರ್ನಲ್ಲಿಯೂ ಔರೈಯಾ ಜಿಲ್ಲೆಯ ಹಳ್ಳಿಯೊಂದರಲ್ಲಿ 6 ವರ್ಷದ ಬಾಲಕಿಯ ಮೇಲಿನ ಕ್ರೌರ್ಯದ ಘಟನೆ ಬೆಳಕಿಗೆ ಬಂದಿದೆ. ಇಲ್ಲಿ ಹಗಲು ಹೊತ್ತಿನಲ್ಲಿ ವ್ಯಕ್ತಿಯೊಬ್ಬ ಬಾಲಕಿಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ಆತ ಪರಾರಿಯಾಗಿದ್ದ.
ಸೆಪ್ಟೆಂಬರ್ನಲ್ಲಿ ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನುಷ ಘಟನೆ ನಡೆದಿದ್ದು, ಚಲಿಸುತ್ತಿದ್ದ ವ್ಯಾನ್ನಲ್ಲಿ ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. 13 ವರ್ಷದ ಬಾಲಕಿಗೆ ಮತ್ತು ಬರುವ ಔಷಧ ನೀಡಿದ ನಂತರ ಆಕೆಯನ್ನು ಮೂವರು ಯುವಕರು ಅಪಹರಿಸಿದ್ದು, ಚಲಿಸುತ್ತಿದ್ದ ವ್ಯಾನ್ ನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಸಾಮೂಹಿಕ ಅತ್ಯಾಚಾರದ ಬಳಿಕ ಆ ಬಾಲಕಿಯನ್ನು ಫ್ಲೈಓವರ್ ಅಡಿಯಲ್ಲಿ ಎಸೆದು ಕಿರಾತಕರು ಪರಾರಿಯಾಗಿದೆ. ಬಾಲಕಿಗೆ ಪ್ರಜ್ಞೆ ಬಂದಾಗ ಮನೆಗೆ ಬಂದಿದ್ದು, ನಡೆದ ಹೀನಕೃತ್ಯವನ್ನು ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಸಂತ್ರಸ್ತೆಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಛಾಟಾ ಪೊಲೀಸರು ಪರಾರಿಯಾಗಿರುವ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಸುದ್ದಿಯನ್ನೂ ಓದಿ : Physical Abuse: ಕಸ್ಟಮರ್ ಕೇರ್ನಲ್ಲಿ ಪರಿಚಯ, ಹೋಟೆಲ್ಗೆ ಕರೆದೊಯ್ದುಅತ್ಯಾಚಾರ: ಯುವಕನ ಮೇಲೆ ಯುವತಿಯ ದೂರು