Sunday, 11th May 2025

Tumkur News: ಪ್ರತಿಭಾ ಕಾರಂಜಿ ರಾಜ್ಯ ಮಟ್ಟಕ್ಕೆ ಆಯ್ಕೆ

ಚಿಕ್ಕನಾಯಕನಹಳ್ಳಿ: ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಕೆ.ಸೊಗಸು ಪ್ರೌಢಶಾಲೆ ವಿಭಾಗದ ಜಾನಪದ ಗೀತೆ ಸ್ಪರ್ಧೆಯಲ್ಲಿ ಹಾಗು ಸಿ.ಎ.ಸಾನ್ವಿ ಹಿರಿಯ ಪ್ರಾಥಮಿಕ ವಿಭಾಗದ ಕವನ ವಾಚನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಪ್ರವೇಶ ಪಡೆದಿದ್ದಾರೆ.

ಶಾಲಾ ಶಿಕ್ಷಣ ಇಲಾಖೆಯಿಂದ ಇತ್ತೀಚೆಗೆ ತುಮಕೂರಿನ ಸಿದ್ದಗಂಗಾ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಯಲ್ಲಿ ಈ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಪಿ.ಎನ್. ಮೋಹನ್ ಮತ್ತು ಬಿ.ಎಸ್.ಸಿಂಚನ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಶಿಫಾ ಮತ್ತು ತಂಡ ಕವಾಲಿಯಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಇವರ ಸಾಧನೆಗೆ ರೋಟರಿ ಎಜುಕೇಶನ್ ಟ್ರಸ್ಟ್ ಸದಸ್ಯರು, ಶಿಕ್ಷಕ ವೃಂದ ಹಾಗು ಪಾಲಕರು ಅಭಿನಂದನೆ ಸಲ್ಲಿಸಿದ್ದಾರೆ.