Saturday, 10th May 2025

Mandya News: ವಿಚಾರಣೆಗೆ ಕರೆದ ಎಎಸ್‌ಐ ಮೇಲೆ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ ಆರೋಪಿ!

Mandya News

ಮಂಡ್ಯ: ವಿಚಾರಣೆಗೆ ಕರೆದ ಎಎಸ್‌ಐ ಮೇಲೆ ಆರೋಪಿಯೊಬ್ಬ ನಡುರಸ್ತೆಯಲ್ಲೇ ಹಲ್ಲೆಗೆ ಯತ್ನಿಸಿ ರಂಪಾಟ ನಡೆಸಿದ ಘಟನೆ (Mandya News) ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ನಾಗಮಂಗಲ ಗ್ರಾಮಾಂತರ ಎಎಸ್‌ಐ ರಾಜು ಮೇಲೆ ಮಜ್ಜನಕೊಪ್ಪಲು ಪೂಜಾರಿ ಕೃಷ್ಣ ಹಲ್ಲೆಗೆ ಯತ್ನಿಸಿ ದರ್ಪ ತೋರಿದ್ದು, ಆತನನ್ನು ಬಂಧಿಸಲಾಗಿದೆ.

ಆರೋಪಿ ಕೃಷ್ಣನ ವಿರುದ್ಧ ಆತನ ತಾಯಿ ಠಾಣೆಗೆ ದೂರು ನೀಡಿದ್ದರು. ಹಣಕ್ಕೆ ಬೇಡಿಕೆ ಇಟ್ಟು ನಿತ್ಯ ಕಿರುಕುಳ ನೀಡುತ್ತಿದ್ದಾನೆ ಎಂದು ದೂರು ಸಲ್ಲಿಸಲಾಗಿತ್ತು. ದೂರಿನ ಹಿನ್ನೆಲೆ ಕೃಷ್ಣನನ್ನು ಠಾಣೆಗೆ ಕರೆತರಲು ಎಎಸ್‌ಐ ರಾಜು ತೆರಳಿದ್ದರು. ನಾಗಮಂಗಲದ ಕೋರ್ಟ್ ಬಳಿ ನಿಂತಿದ್ದ ಕೃಷ್ಣನನ್ನು ಎಎಸ್‌ಐ ರಾಜು ಠಾಣೆಗೆ ಕರೆದಿದ್ದರು.

ಠಾಣೆಗೆ ಬರಲು ಒಪ್ಪದಿದ್ದಾಗ ಕೃಷ್ಣನ ಕಾಲರ್ ಹಿಡಿದು ಬಲವಂತವಾಗಿ ಆಟೋಗೆ ಹತ್ತಿಸಲು ಎಎಸ್‌ಐ ಯತ್ನಿಸಿದ್ದಾರೆ. ಈ ವೇಳೆ ಎಎಸ್‌ಐ ರಾಜುವನ್ನು ಕೃಷ್ಣ ತಳ್ಳಿದ್ದಾನೆ. ತಳ್ಳಾಡಿದಾಗ ರಾಜು ಕೆಳಗೆ ಬಿದ್ದಿದ್ದಾರೆ. ಬಳಿಕ ಕೃಷ್ಣನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಎಲ್ಲಾ ದೃಶ್ಯವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

ಈ ಸುದ್ದಿಯನ್ನೂ ಓದಿ | Belagavi News: ಗಂಡನನ್ನು ಬಿಟ್ಟು ಇಬ್ಬರು ಮಕ್ಕಳ ಸಮೇತ ಸ್ನೇಹಿತನ ಜತೆ ಓಡಿ ಹೋದ ಮಹಿಳೆ!

ಕೋಲಾರದಲ್ಲಿ ಯುವಕನ ಅಟ್ಟಾಡಿಸಿ ಕೊಲೆ; ನಾಲ್ವರು ಆರೋಪಿಗಳು ಅರೆಸ್ಟ್

Murder Case

ಕೋಲಾರ: ನಗರದಲ್ಲಿ ಯುವಕನೊಬ್ಬನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ (Murder Case) ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಗಲ್ ಪೇಟೆ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಪ್ರೇಯಸಿಯ ಮನೆಗೆ ಹೋಗಿ ಹಿಂದಿರುಗುವಾಗ ಯುವಕನ ಮೇಲೆ ದಾಳಿ ನಡೆಸಲಾಗಿದ್ದು, ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ (28) ಎನ್ನುವ ಯುವಕ ಸಾವನ್ನಪ್ಪಿದ್ದಾನೆ. ಪ್ರಕರಣದಲ್ಲಿ ಆಫ್ರೀದ್, ಜಮೀರ್, ನಜೀರ್ ಹಾಗೂ ಸಲ್ಮಾನ್ ಪಾಷ ಎಂಬುವವರನ್ನು ಬಂಧಿಸಲಾಗಿದೆ.

ಕಳೆದ ರಾತ್ರಿ ಪ್ರಿಯತಮೆ ಮನೆಗೆ ತೆರಳಿದ್ದಾಗ ಕೋಲಾರದ ನೂರ್ ನಗರದಲ್ಲಿಯುವಕನನ್ನು ಅಟ್ಟಾಡಿಸಿ ಕೊಲೆ ಮಾಡಲಾಗಿತ್ತು. ಉಸ್ಮಾನ್ ಕಳೆದ 5 ವರ್ಷಗಳ ಹಿಂದೆ ಜಬೀನ್ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಆಕೆಗೆ ಕಿಡ್ನಿ ವಿಫಲವಾಗಿ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರ ಆರೋಗ್ಯ ವಿಚಾರಿಸಲು ಬಂದಿದ್ದ ಜಬೀನಾ ಸಂಬಂಧಿ ಯುವತಿಯೊಂದಿಗೆ ಉಸ್ಮಾನ್‌ಗೆ ಪ್ರೀತಿಯಾಗಿತ್ತು. ಈ ವಿಷಯ ತಿಳಿದು ಆತನ ಪತ್ನಿ ಮಹಿಳಾ ಠಾಣೆಗೆ ದೂರು ನೀಡಿದ್ದಳು. ಬಳಿಕ ತನ್ನ ಪತಿಯಿಂದ ದೂರಾಗಿ ತವರು ಮನೆ ಸೇರಿದ್ದಳು ಎಂದು ತಿಳಿದು ಬಂದಿದೆ.

ಕೊಲೆಯಾದ ಉಸ್ಮಾನ್ ಕಳೆದ ರಾತ್ರಿ ತನ್ನ ಪ್ರೇಯಸಿಯ ಮನೆಗೆ ತೆರಳಿದ್ದ. ಅಲ್ಲದೇ ಆಕೆಯನ್ನು ಮದುವೆ ಮಾಡಿಕೊಡುವಂತೆ ಹೇಳಿದ. ಇದರಿಂದ ಆತ ವಾಪಸ್ ತೆರಳುತ್ತಿದ್ದಾಗ ಯುವತಿಯ ಕುಟುಂಬಸ್ಯರು ಹಾಗೂ ಸ್ಥಳೀಯರು, ಉಸ್ಮಾನ್ನನ್ನು ಏರಿಯಾದಲ್ಲಿ ಅಟ್ಟಾಡಿಸಿ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಈ ಸುದ್ದಿಯನ್ನೂ ಓದಿ | Viral News: ಗೆಳತಿಯನ್ನು ಮೆಚ್ಚಿಸಲು ಸಿಂಹದ ಪಂಜರ ಹೊಕ್ಕ ಭೂಪ! ಆಮೇಲೆ ನಡೆದಿದ್ದೇ ಬೇರೆ

Leave a Reply

Your email address will not be published. Required fields are marked *