ಚಿಕ್ಕಬಳ್ಳಾಪುರ: ಬಾಗೇಪಲ್ಲಿ ಪುರಸಭೆಯ ಬಿಲ್ ಕಲೆಕ್ಟರ್ ಅರುಣ್ ಕುಮಾರ್ 25 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಶುಕ್ರವಾರ ನಡೆದಿದೆ.
ಅಂಜನ್ ಕುಮಾರ್ ಎನ್ನುವವರಿಗೆ ಇ ಖಾತೆ ಮಾಡಿಕೊಡಲು ೨೫ ಸಾವಿರ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ ಅರುಣ್ ಕುಮಾರ್ ಶುಕ್ರವಾರ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಲಂಚದ ಹಣ ಪಡೆಯುತ್ತಿದ್ದ ವೇಳೆ ಚಿಕ್ಕಬಳ್ಳಾಪುರ ಲೋಕಾಯುಕ್ತ ಡಿವೈಎಸ್ಪಿ ವೀರೇಂದ್ರಕುಮಾರ್ ನೇತೃತ್ವದಲ್ಲಿ ದಾಳಿ ಮಾಡಿ ಆರೋಪಿಯನ್ನು ಹಣದ ಸಮೇತ ಬಂಧಿಸಲಾಗಿದೆ.
ಇದನ್ನೂ ಓದಿ: #KarnatakaLokayukta