Saturday, 10th May 2025

Champions Trophy: ಚಾಂಪಿಯನ್ಸ್ ಟ್ರೋಫಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ

ಸಿಡ್ನಿ: ಮುಂಬರುವ ಚಾಂಪಿಯನ್ಸ್ ಟ್ರೋಫಿಗಾಗಿ(Champions Trophy) ಆಸ್ಟ್ರೇಲಿಯಾ ತಂಡ(Australia squad) ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಪ್ಯಾಟ್ ಕಮಿನ್ಸ್ ಮುನ್ನಡೆಸಲಿದ್ದಾರೆ. ಸೋಮವಾರ ಕ್ರಿಕೆಟ್‌ ಆಸ್ಟ್ರೇಲಿಯಾ ತಂಡವನ್ನು ಪ್ರಟಿಸಿತು. ಬಾರ್ಡರ್‌-ಗವಾಸ್ಕರ್‌ ಟೆಸ್ಟ್‌ ಸರಣಿಯ ವೇಳೆ ಗಾಯಗೊಂಡಿದ್ದ ವೇಗಿ ಜೋಶ್‌ ಹ್ಯಾಜಲ್‌ವುಡ್‌ ತಂಡಕ್ಕೆ ಮರಳಿದ್ದಾರೆ. ಅನುಭವಿಗಳ ಜತೆ ಯುವ ಆಟಗಾರ ಆರೋನ್ ಹಾರ್ಡಿಗೂ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಡೇವಿಡ್‌ ವಾರ್ನರ್‌ ನಿವೃತ್ತಿಯಾದ ಕಾರಣ ಆರಂಭಿಕರಾಗಿ ಟ್ರಾವಿಸ್ ಹೆಡ್, ಮ್ಯಾಥ್ಯೂ ಶಾರ್ಟ್ ಹಾಗೂ ಆರೋನ್ ಹಾರ್ಡಿ ಆಯ್ಕೆಯಾಗಿದ್ದಾರೆ. ಮಧ್ಯಮ ಕ್ರಮಾಂಕದ ಬ್ಯಾಟರ್​ಗಳಾಗಿ ಸ್ಟೀವನ್‌ ಸ್ಮಿತ್, ಮಾರ್ನಸ್ ಲಾಬುಶೇನ್ ಕಾಣಿಸಿಕೊಂಡಿದ್ದಾರೆ. ಆಲ್​ರೌಂಡರ್​ಗಳಾಗಿ ಮಾರ್ಕಸ್ ಸ್ಟೊಯಿನಿಸ್, ಮಿಚೆಲ್ ಮಾರ್ಷ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯಾ ತನ್ನ ಮೊದಲ ಪಂದ್ಯವನ್ನು ಇಂಗ್ಲೆಂಡ್ ವಿರುದ್ಧ ಆಡಲಿದೆ. ಈ ಪಂದ್ಯ ಫೆಬ್ರವರಿ 22 ರಂದು ಲಾಹೋರ್​ ಸ್ಟೇಡಿಯಂನಲ್ಲಿ ನಿಗದಿಯಾಗಿದೆ.

ಆಸ್ಟ್ರೇಲಿಯಾ ತಂಡ

ಪ್ಯಾಟ್ ಕಮಿನ್ಸ್‌ (ನಾಯಕ), ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಆರನ್ ಹಾರ್ಡಿ, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಶೇನ್‌, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಸ್ಟೀವನ್‌ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್, ಆ್ಯಡಂ ಝಂಪ.

19 ದಿನಗಳ ಕಾಲ ನಡೆಯಲಿರುವ ಟೂರ್ನಿಯಲ್ಲಿ ಒಟ್ಟು 15 ಪಂದ್ಯಗಳು ನಡೆಯಲಿವೆ. ಭಾರತ ಒಳಗೊಂಡ 3 ಲೀಗ್​ ಪಂದ್ಯಗಳು ಮತ್ತು ಒಂದು ಸೆಮಿಫೈನಲ್​ ಪಂದ್ಯ ದುಬೈನಲ್ಲಿ ನಿಗದಿಯಾಗಿದೆ. ಟೂರ್ನಿಯ ಉಳಿದ 9 ಲೀಗ್​ ಮತ್ತು ಇನ್ನೊಂದು ಸೆಮಿಫೈನಲ್​ ಪಂದ್ಯ ಪಾಕಿಸ್ತಾನದ ಕರಾಚಿ, ರಾವಲ್ಪಿಂಡಿ ಮತ್ತು ಲಾಹೋರ್​ನಲ್ಲಿ ನಿಗದಿಯಾಗಿವೆ. 2ನೇ ಸೆಮಿಫೈನಲ್​ ಮಾರ್ಚ್​ 2ರಂದು ಲಾಹೋರ್​ನಲ್ಲಿ ನಿಗದಿಯಾಗಿದೆ. ಟೂರ್ನಿಯಲ್ಲಿ ಆಡುವ 8 ತಂಡಗಳನ್ನು ತಲಾ 4ರಂತೆ 2 ಗುಂಪುಗಳಲ್ಲಿ ವಿಂಗಡಿಸಲಾಗಿದ್ದು, ರೌಂಡ್​ ರಾಬಿನ್​ ಲೀಗ್​ ಬಳಿಕ ಪ್ರತಿ ಗುಂಪಿನ ಅಗ್ರ 2 ತಂಡಗಳು ಸೆಮಿಫೈನಲ್​ಗೇರಲಿವೆ.

ವೇಳಾಪಟ್ಟಿ

ಫೆ.19 ಪಾಕಿಸ್ತಾನ-ನ್ಯೂಜಿಲ್ಯಾಂಡ್‌, ಸ್ಥಳ: ಕರಾಚಿ

ಫೆ. 20 ಬಾಂಗ್ಲಾದೇಶ-ಭಾರತ, ಸ್ಥಳ: ದುಬೈ

ಫೆ. 21 ಅಫ್ಘಾನಿಸ್ತಾನ-ದ. ಆಫ್ರಿಕಾ, ಸ್ಥಳ: ಕರಾಚಿ

ಫೆ. 22 ಆಸ್ಟ್ರೆಲಿಯಾ-ಇಂಗ್ಲೆಂಡ್, ಸ್ಥಳ:​ ಲಾಹೋರ್

ಫೆ. 23 ಭಾರತ-ಪಾಕಿಸ್ತಾನ,ಸ್ಥಳ: ದುಬೈ

ಫೆ. 24 ಬಾಂಗ್ಲಾದೇಶ-ನ್ಯೂಜಿಲ್ಯಾಂಡ್‌, ಸ್ಥಳ:​ ರಾವಲ್ಪಿಂಡಿ

ಫೆ. 25 ಅಸ್ಟ್ರೆಲಿಯಾ-ದ. ಆಫ್ರಿಕಾ,ಸ್ಥಳ: ರಾವಲ್ಪಿಂಡಿ

ಫೆ. 26 ಅಫ್ಘಾನಿಸ್ತಾನ-ಇಂಗ್ಲೆಂಡ್,ಸ್ಥಳ:​ ಲಾಹೋರ್

ಫೆ. 27 ಪಾಕಿಸ್ತಾನ-ಬಾಂಗ್ಲಾದೇಶ,ಸ್ಥಳ: ರಾವಲ್ಪಿಂಡಿ

ಫೆ. 28 ಅಫ್ಘಾನಿಸ್ತಾನ-ಆಸ್ಟ್ರೆಲಿಯಾ,ಸ್ಥಳ: ಲಾಹೋರ್​

ಮಾ. 1 ದಣ ಆಫ್ರಿಕಾ-ಇಂಗ್ಲೆಂಡ್,ಸ್ಥಳ:​ ಕರಾಚಿ

ಮಾ. 2 ಭಾರತ-ನ್ಯೂಜಿಲ್ಯಾಂಡ್‌, ಸ್ಥಳ:​ ದುಬೈ

ಮಾ. 4 ಸೆಮಿಫೈನಲ್-1, ಸ್ಥಳ: ದುಬೈ

ಮಾ. 5 ಸೆಮಿಫೈನಲ್​-2, ಸ್ಥಳ: ಲಾಹೋರ್​

ಮಾ. 9 ಫೈನಲ್​ -ಸ್ಥಳ: ದುಬೈ/ಲಾಹೋರ್

Leave a Reply

Your email address will not be published. Required fields are marked *