Saturday, 10th May 2025

Champions Trophy 2025: ಭಾರತ-ಪಾಕ್‌ ಬಿಟ್ಟು ಪ್ರಕಟಗೊಂಡ 6 ತಂಡಗಳ ಆಟಗಾರರ ಪಟ್ಟಿ ಇಲ್ಲಿದೆ

ನವದೆಹಲಿ: ಮಿನಿ ವಿಶ್ವಕಪ್‌ ಎಂದೇ ಕರೆಯಲ್ಪಡುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ(Champions Trophy 2025) ಆರಂಭಕ್ಕೆ ಕ್ರಿಕೆಟ್‌ ಪ್ರೇಮಿಗಳು ತುದಿಗಾಲಲ್ಲಿ ಕಾದು ಕುಳಿತಿದ್ದಾರೆ. ಈಗಾಗಲೇ ಟೂರ್ನಿಯಲ್ಲಿ ಪಾಲ್ಗೊಳ್ಳುವ 8 ತಂಡಗಳ ಪೈಕಿ 6 ತಂಡಗಳು ಪ್ರಕಟಗೊಂಡಿದೆ. ಹಾಲಿ ಚಾಂಪಿಯನ್‌ ಪಾಕಿಸ್ತಾನ ಮತ್ತು ಭಾರತ ನಡುವಿನ ಹೈವೋಲ್ಟೇಜ್‌ ಪಂದ್ಯವೂ ಈ ಕೂಟದ ಆಕರ್ಷಣೆಗಳಲ್ಲೊಂದು. ಇತ್ತಂಡಗಳ ಈ ಮುಖಾಮುಖಿ ಫೆ. 23ರಂದು ದುಬೈನಲ್ಲಿ ನಡೆಯಲಿದೆ. ಆದರೆ ಉಭಯ ದೇಶಗಳು ಇದುವರೆ ತಂಡವನ್ನು ಪ್ರಕಟಿಸಿಲ್ಲ. ಪ್ರಕಟಗೊಂಡ 6 ತಂಡಗಳು ಹೀಗಿವೆ.

ದಕ್ಷಿಣ ಆಫ್ರಿಕಾ ತಂಡ

ಟೆಂಬಾ ಬವುಮಾ (ನಾಯಕ), ಟೋನಿ ಡಿ ಜೊರ್ಜಿ, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಲುಂಗಿ ಎನ್‌ಗಿಡಿ, ಅನ್ರಿಚ್ ನಾರ್ಜೆ, ಕಗಿಸೊ ರಬಾಡಾ, ರಯಾನ್ ರಿಕೆಲ್ಟನ್, ತಬ್ರೈಜ್ ಶಮ್ಸಿ, ಡುಸ್ಸೆನ್ ಸ್ಟಬ್ವಾನ್, ಟ್ರಿಸ್ಟಾನ್ ಸ್ಟಬ್ಸ್.

ಅಫ್ಘಾನಿಸ್ತಾನ ತಂಡ

ಹಶ್ಮತುಲ್ಲಾ ಶಾಹಿದಿ (ನಾಯಕ), ಇಬ್ರಾಹಿಂ ಜದ್ರಾನ್, ರಹಮಾನುಲ್ಲಾ ಗುರ್ಬಾಜ್, ಸೇದಿಕುಲ್ಲಾ ಅಟಲ್, ರಹಮತ್ ಷಾ, ಇಕ್ರಮ್ ಅಲಿಖಿಲ್, ಗುಲ್ಬದಿನ್ ನೈಬ್, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ರಶೀದ್ ಖಾನ್, ಎಎಮ್ ಗಜನ್ಫರ್, ನೂರ್ ಅಹ್ಮದ್, ಫಜಲ್ಹಕ್ ಫಾರೂಕಿ, ಫರೀದ್ ಮಲಿಕ್, ನವೀದ್ ಜದ್ರಾನ್.

ಆಸ್ಟ್ರೇಲಿಯಾ ತಂಡ

ಪ್ಯಾಟ್ ಕಮಿನ್ಸ್‌ (ನಾಯಕ), ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಆರನ್ ಹಾರ್ಡಿ, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಶೇನ್‌, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಸ್ಟೀವನ್‌ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್, ಆ್ಯಡಂ ಝಂಪ.

ನ್ಯೂಜಿಲ್ಯಾಂಡ್: ಮಿಚೆಲ್ ಸ್ಯಾಂಟ್ನರ್ (ನಾಯಕ), ವಿಲ್ ಯಂಗ್, ಡೆವೊನ್ ಕಾನ್ವೇ, ರಾಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಮಾರ್ಕ್ ಚಾಪ್‌ಮನ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್, ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ನಾಥನ್ ಸ್ಮಿತ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಬೆನ್ ಸಿಯರ್ಸ್, ವಿಲ್ ಒ ರೂರ್ಕ್.

ಬಾಂಗ್ಲಾದೇಶ ತಂಡ

ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ಮುಶ್ಫಿಕರ್ ರಹೀಮ್ (ವಿ.ಕೀ), ತೌಹಿದ್ ಹೃದಯ್, ಸೌಮ್ಯ ಸರ್ಕಾರ್, ತಂಝಿದ್ ಹಸನ್, ಮಹ್ಮುದುಲ್ಲಾ, ಜೇಕರ್ ಅಲಿ, ಮೆಹಿದಿ ಹಸನ್ ಮಿರಾಜ್, ರಿಶಾದ್ ಹೊಸೈನ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರಹಮಾನ್, ಪರ್ವೇಜ್ ಹೊಸೈನ್, ನಸುಮ್ ಅಹ್ಮದ್, ತಂಜಿಮ್ ಹಸನ್, ನಹಿದ್ ರಾಣಾ.

ಇಂಗ್ಲೆಂಡ್‌ ತಂಡ

ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮೀ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.

Leave a Reply

Your email address will not be published. Required fields are marked *