Tuesday, 13th May 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 18 ಸಾವಿರ ಕೋಟಿ ಬಿಡುಗಡೆ

ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮನ್ ನಿಧಿ ಯೋಜನೆಯಡಿ 18 ಸಾವಿರ ಕೋಟಿ ರೂ.ಗಳನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬಿಡುಗಡೆ ಮಾಡಿದರು.

ನೈರುತ್ಯ ದೆಹಲಿಯ ಮೆಹ್ರೌಲಿಯಲ್ಲಿರುವ ಕಿಶನ್ ಗಡ್‌ ಗ್ರಾಮದ ಗೌಶಾಲ ದೇವಾಲಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ, ಎಂಎಸ್ ಪಿ ವಿಚಾರದಲ್ಲಿ ಪ್ರತಿಪಕ್ಷಗಳು ರೈತರನ್ನು ದಾರಿ ತಪ್ಪಿಸುತ್ತಿವೆ. ಎಂಎಸ್ ಪಿ ವ್ಯವಸ್ಥೆ ಹಾಗೆಯೇ ಉಳಿಯುತ್ತದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಮೂರು ಕೃಷಿ ಕಾನೂನುಗಳು ರೈತರ ಪರವಾಗಿವೆ. ಎಂಎಸ್ ಪಿ ವ್ಯವಸ್ಥೆಯನ್ನು ಯಾರೂ ತೆಗೆದುಹಾಕಲು ಅಥವಾ ಅವರಿಂದ ರೈತರ ಭೂಮಿಯನ್ನು ಕಿತ್ತುಕೊಳ್ಳಲಾಗುವುದಿಲ್ಲ. ರೈತರ ಸಂಘಟನೆಗಳಜತೆ ಮುಕ್ತ ಮನಸ್ಸಿನಿಂದ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ’ ಎಂದು ಹೇಳಿದ್ದಾರೆ.

‘ಇಂದು ಸಂಪೂರ್ಣ ಹಣ ನೇರವಾಗಿ ರೈತರ ಖಾತೆಗೆ ಜಮೆಯಾಗುತ್ತದೆ ಎಂದು ಆತ್ಮವಿಶ್ವಾಸದಿಂದ ಹೇಳಬಹುದು. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ’ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅಭಿಪ್ರಾಯಪಟ್ಟರು.

Leave a Reply

Your email address will not be published. Required fields are marked *