Thursday, 15th May 2025

ಹಾವೇರಿಯಲ್ಲಿ ಎಸಿಬಿಯಿಂದ ಅಹವಾಲು ಸ್ವೀಕಾರ

ಹಾವೇರಿ: ಭ್ರಷ್ಟಾಚಾರ ನಿಗ್ರಹದಳ ಹಾವೇರಿ ಪೊಲೀಸ್ ಠಾಣೆ ಅಧಿಕಾರಿಗಳಿಂದ ದಿನಾಂಕ 25-01-2021 ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ರಾಣೇಬೆನ್ನೂರು ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಹಾಗೂ ಎಸಿಬಿ ಕಾರ್ಯವೈಖರಿ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

ಎಸಿಬಿ ಅಧಿಕಾರಿಗಳ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರು, ವರ್ತಕರು, ಆಟೋ ಚಾಲಕರು, ಭ್ರಷ್ಟಾಚಾರ ವಿರುದ್ಧ ಹೋರಾಟದಲ್ಲಿ ತೊಡಗಿಕೊಂಡಿರುವ ಸಂಘಟನೆ ಪ್ರತಿನಿಧಿಗಳು ಸದರಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು. ಕುಂದುಕೊರತೆ, ಅಹಲವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಭ್ರಷ್ಟಾಚಾರ ನಿಗ್ರಹದಳದ ಹಾವೇರಿ ಪೊಲೀಸ್ ಠಾಣಾ ಉಪಾಧೀಕ್ಷಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಎಸಿಬಿ ಡಿ.ಎಸ್.ಪಿ. ಮೊ.9480806229, ಪೊಲೀಸ್ ಇನ್ಸಪೆಕ್ಟರ್ ಮೊ. 9480806289 ಹಾಗೂ 9480806290, ದೂರವಾಣಿ ಸಂಖ್ಯೆ08375-235533 ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು.

Leave a Reply

Your email address will not be published. Required fields are marked *