Monday, 12th May 2025

ಪಟಾಕಿ ಘಟಕದಲ್ಲಿ ಸ್ಫೋಟ: 11 ಮಂದಿ ಸಾವು, 22 ಜನರಿಗೆ ಗಾಯ

ವಿರುಧುನಗರ: ತಮಿಳುನಾಡಿನಲ್ಲಿ ಪಟಾಕಿ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 11 ಮಂದಿ ಮೃತಪಟ್ಟು, 22 ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಮಧ್ಯಾಹ್ನ ವೆಂಬಕೊಟ್ಟೈ ನ ಕೊಟ್ಟೈಪಾಟಿಯಲ್ಲಿ ಅವಘಡ ಸಂಭವಿಸಿದ್ದು, ಮೃತ 11 ಮಂದಿಯ ಪೈಕಿ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತದೇಹಗಳ ಗುರುತು ಪತ್ತೆ ಮಾಡಲು ಸಾಧ್ಯವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಮೂರು ಅಗ್ನಿಶಾಮಕ ವಾಹನಗಳೊಂದಿಗೆ, 30 ರಕ್ಷಣಾ ಸಿಬ್ಬಂದಿಗಳು ಹಾಗೂ ಐವರು ಅಧಿಕಾರಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆ ನಡೆದಾಗ ಕನಿಷ್ಟ 50 ಮಂದಿ ಕಾರ್ಮಿಕರು ಒಳಗಡೆ ಇದ್ದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *