Wednesday, 14th May 2025

ವಿಮಾನ ನಿಲ್ದಾಣ ನಿರ್ಮಾಣದಿಂದ ಉದ್ಯೋಗ ಸೃಷ್ಟಿ: ಸಿಎಂ ಯಡಿಯೂರಪ್ಪ

ವಿಜಯಪುರ: ವಿಜಯಪುರ ನಗರ ಸಮೀಪ ಮದಭಾವಿ ಬಳಿ ಉದ್ದೇಶಿತ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಶಿವಮೊಗ್ಗದಿಂದ ವರ್ಚುವಲ್ ವ್ಯವಸ್ಥೆಯ ಮೂಲಕ ಚಾಲನೆ ನೀಡಿದರು.

ತೋಟಗಾರಿಕೆ ಬೆಳೆಗೆ ಪ್ರಸಿದ್ಧವಾದ ವಿಜಯಪುರದಲ್ಲಿ ವಿಮಾನ ನಿಲ್ದಾಣ ನಿರ್ಮಾಣದಿಂದ ಉದ್ಯೋಗ ಸೃಷ್ಟಿಯಾಗುವ ಜೊತೆಗೆ ಪ್ರವಾಸೋದ್ಯಮ ಬೆಳವಣಿಗೆಗೆ, ತೋಟಗಾರಿಕೆ ಉತ್ಪನ್ನಗಳ ರಫ್ತಿಗೆ ಅನುಕೂಲವಾಗಲಿದೆ ಎಂದು ಯಡಿಯೂರಪ್ಪ ಹೇಳಿದರು.

ಮದಭಾವಿಯಲ್ಲಿ 727 ಎಕರೆಯಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ₹220 ಕೋಟಿ ಮೊತ್ತದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ಮೊದಲ ಹಂತದಲ್ಲಿ ₹ 95 ಕೋಟಿ ಮೊತ್ತದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *