Thursday, 15th May 2025

ಸಾಮಾಜಿಕ ಸಂದೇಶ ಹೊತ್ತ ಸೆಪ್ಟೆಂಬರ್‌ 10

ಸೆಂಟಿಮೆಂಟ್ ಚಿತ್ರಗಳಿಗೆ ಹೆಸರಾದ ನಿರ್ದೇಶಕ ಸಾಯಿಪ್ರಕಾಶ್ ಮೊದಲ ಬಾರಿಗೆ ಸಾಮಾಜಿಕ ಸಂದೇಶ ಹೊತ್ತ  ಚಿತ್ರವೊಂದನ್ನು ನಿರ್ದೇಶನ ಮಾಡಿದ್ದಾರೆ.

‘ಸೆಪ್ಟೆೆಂಬರ್ 10’ನ್ನು ವಿಶ್ವ ಆತ್ಮಹತ್ಯೆೆ ನಿವಾರಣಾ ದಿನವೆಂದು ಘೋಷಿಸಲಾಗಿದೆ. ಅದೇ ಹೆಸರಿನ ಚಿತ್ರವನ್ನುಸಾಯಿಪ್ರಕಾಶ್ ನಿರ್ದೇಶನ ಮಾಡಿದ್ದಾರೆ. ಕ್ಷುಲ್ಲುಕ ಕಾರಣಗಳಿಗೆ ಆತ್ಮಹತ್ಯೆೆ ಮಾಡಿಕೊಳ್ಳುವವರನ್ನು ತಡೆಗಟ್ಟುವಂತ ಅನೇಕ ವಿಚಾರಗಳನ್ನು ಈ ಚಿತ್ರದಲ್ಲಿ ಹೇಳಲಾಗಿದೆ. ತೆಲಂಗಾಣದ ಕ್ಯಾಪ್ಟನ್ ಜಿ.ಜಿ.ರಾವ್ ಅವರು ಇತ್ತೀಚೆಗೆ, ಹೆಚ್ಚಾಗುತ್ತಿರುವ ರೈತರ ಆತ್ಮಹತ್ಯೆೆ ಪ್ರಕರಣಗಳನ್ನು ಗಮನಿಸಿ ಒಂದು ಪುಸ್ತಕವನ್ನು ಬರೆದಿದ್ದರು. ಅದೇ ಪುಸ್ತಕವನ್ನು ಆಧಾರವಾಗಿಟ್ಟುಕೊಂಡು ಸಾಯಿಪ್ರಕಾಶ್ ಅವರು ‘ಸೆಪ್ಟೆೆಂಬರ್ 10’ ಚಿತ್ರ ನಿರ್ದೇಶನ ಮಾಡಿದ್ದಾರೆ.

ಆತ್ಮಹತ್ಯೆೆ ಮಾಡಿಕೊಳ್ಳುವವರ ಮನಸ್ಥಿತಿ ಹೇಗಿರುತ್ತದೆ. ಎಲ್ಲದಕ್ಕೂ ಆತ್ಮಹತ್ಯೆೆಯೊಂದೇ ಪರಿಹಾರವಲ್ಲ, ಸಂದರ್ಭವನ್ನು ಧೈರ್ಯದಿಂದ ಎದುರಿಸಿದರೆ ಖಂಡಿತ ಗೆಲುವು ಸಿಗುತ್ತದೆ ಎಂದು ಹೇಳುವ ಚಿತ್ರ ಇದಾಗಿದೆ. ನಿರ್ದೇಶಕ ಸಾಯಿಪ್ರಕಾಶ್, ತಮ್ಮ
ಶ್ರೀದೇವಿ ಫಿಲಂಸ್ ಮೂಲಕ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ನಿರ್ಮಾಣದ ಹೊಣೆಯನ್ನು ಹೊತ್ತಿದ್ದಾರೆ. ಏಳು ಪ್ರಕರಣ ಗಳನ್ನಿಟ್ಟುಕೊಂಡು, ವಿಭಿನ್ನ ಸ್ಥಿತಿಗಳಲ್ಲಿ ಆತ್ಮಹತ್ಯೆೆ ಮಾಡಿಕೊಳ್ಳುವುದನ್ನು ಹೇಗೆ ತಪ್ಪಿಸಬಹುದು ಎಂದು ಹೇಳಿದ್ದಾರೆ.

ಕ್ಷುಲ್ಲುಕ ಕಾರಣಗಳಿಗೆಲ್ಲಾ ಆತ್ಮಹತ್ಯೆೆ ಮಾಡಿಕೊಳ್ಳುವ ನಿರ್ಧಾರ ಕೈಗೊಳ್ಳುವವರ ಮನಸ್ಥಿತಿ ಹೇಗಿರುತ್ತೆ, ಅವರು ಅಂತಹ ಕಠಿಣ ನಿರ್ಧಾರ ಕೈಗೊಳ್ಳಲು ಕಾರಣಗಳು, ಹಿನ್ನೆಲೆ ಏನು ಎಂಬುದರ ಕುರಿತಂತೆ ಸಾಕಷ್ಟು ಅಧ್ಯಯನ ಮಾಡಿ ನಿರ್ದೇಶಕರು
ಚಿತ್ರದಲ್ಲಿ ಅಳವಡಿಸಿಕೊಂಡಿದ್ದಾರೆ. ಹಿರಿಯ ನಟ ಶಶಿಕುಮಾರ್ ಚಿತ್ರದಲ್ಲಿ ಮನೋಶಾಸ್ತ್ರಜ್ಞರ ಪಾತ್ರ ನಿರ್ವಹಿಸುವ
ಮೂಲಕ ಚಿತ್ರರಂಗಕ್ಕೆ ರೀ ಎಂಟ್ರಿಯಾಗಿದ್ದಾರೆ. ಅವರ ಪಾತ್ರದ ಮೂಲಕವೂ ಕೂಡ ಒಳ್ಳೆಯ ಸಂದೇಶ ಸಾರಲಾಗಿದೆಯಂತೆ.

ಈ ಚಿತ್ರದಲ್ಲಿ ಹಿರಿಯನಟ ರಮೇಶ್ ಭಟ್ ವಕೀಲನ ಪಾತ್ರ ನಿರ್ವಹಿಸಿದರೆ, ಬಿ.ಜಿ.ರವೀಂದ್ರನಾಥ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಸಿಹಿಕಹಿ ಚಂದ್ರು ಮುಸ್ಲಿಂ ಮುಖಂಡರಾಗಿ, ಚರ್ಚ್ ಫಾದರ್ ಆಗಿ ಶಿವಕುಮಾರ್ ಹಾಗೂ ಸ್ಥಿತಿವಂತ ರೈತನ
ಪಾತ್ರದಲ್ಲಿ ಗಣೇಶರಾವ್ ಕೇಸರ್‌ಕರ್  ನಟಿಸಿದ್ದಾರೆ. ಇನ್ನು ಯುವ ಪ್ರೇಮಿಗಳಾಗಿ ಜಯಸಿಂಹ ಹಾಗೂ ಆರಾಧ್ಯಾ ನಟಿಸಿದ್ದಾರೆ.

ರಶ್ಮಿತಾ ಮಲ್ನಾಡ್, ತನುಜಾ, ಜಯಸಿಂಹ, ಮುರಳೀಧರ್, ಅನಿತಾರಾಣಿ, ಮೀಸೆ ಅಂಜಿನಪ್ಪ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Leave a Reply

Your email address will not be published. Required fields are marked *