Wednesday, 14th May 2025

ಎಪಿಎಂಸಿ ಮಾರುಕಟ್ಟೆ ಕಾರ್ಯಕ್ಷಮತೆ ಹೆಚ್ಚಿಸಲು 198 ಕೋಟಿ ರೂ. ಅನುದಾನ

ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯಕ್ಷಮತೆ ಹೆಚ್ಚಿಸಲು 198 ಕೋಟಿ ರೂಪಾಯಿ ವೆಚ್ಚದಲ್ಲಿ ಗಣಕೀಕರಣಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಇಂದು ಮಂಡಿಸಿದ ಬಜೆಟ್‌ನಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಡಿಸಿಸಿ ಬ್ಯಾಂಕ್‍ನಲ್ಲಿ ಸರ್ಕಾರದ ಸಹಭಾಗಿತ್ವ ಪ್ರೋತ್ಸಾಹಿಸಲು ಷೇರು ಬಂಡವಾಳ ಹೆಚ್ಚಿಸುವ ಉದ್ದೇಶದಿಂದ 21 ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ಗಳಿಗೆ 10 ಲಕ್ಷ ರೂ.ಗಳ ಗರಿಷ್ಠ ಮಿತಿಗೊಳ ಪಟ್ಟು ಶೇ.25ರಷ್ಟು ಷೇರು ಬಂಡವಾಳ ನೀಡಲಾಗುವುದು ಎಂದರು.

ರೈತರು ಉತ್ಪಾದಿಸಿದ ಕೃಷಿ ಉತ್ಪನ್ನಗಳನ್ನು ಉಗ್ರಾಣ ನಿಗಮ, ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು, ಟಿಎಪಿಸಿಎಂಎಸ್ ಹಾಗೂ ಇತರೆ ಸಹಕಾರ ಸಂಸ್ಥೆಗಳು ಹೊಂದಿರುವ ಗೋದಾಮುಗಳಲ್ಲಿ ಸಂಗ್ರಹಿಸಿಡಲು ರೈತರು ಪಾವತಿಸುವ ಸಂಗ್ರಹಣಾ ಶುಲ್ಕದಲ್ಲಿ ಶೇ.25ರಷ್ಟು ಸಹಾಯ ಧನವನ್ನು ಸರ್ಕಾರದಿಂದ ಒದಗಿಸಲಾಗುವುದು. ಈ ಉದ್ದೇಶಕ್ಕಾಗಿ 25 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.

ಟಿಎಪಿಸಿಎಂಎಸ್ ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು ಗೋದಾಮುಗಳಲ್ಲಿ ಶೇಖರಣೆ ಮಾಡಿ ಮಾರುಕಟ್ಟೆ ಬೆಲೆ ಶೇ.60ರಷ್ಟು ಅಡಮಾನ ಸಾಲವನ್ನು ಶೇ.11ರ ಬಡ್ಡಿದರದಲ್ಲಿ ವಿತರಿಸುತ್ತಿವೆ.

 

Leave a Reply

Your email address will not be published. Required fields are marked *