Wednesday, 14th May 2025

ಇನ್ನೊಂದು ವಾರ ಲಾಕ್‌ಡೌನ್ ವಿಸ್ತರಿಸಲು ಡಿಸಿಎಂ ಕಾರಜೋಳ ಮನವಿ

ಬೆಳಗಾವಿ: ರಾಜ್ಯದ ಉತ್ತರ ಗಡಿ ಭಾಗದ ಬೆಳಗಾವಿ ಜಿಲ್ಲೆಯು ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿಗೆ ಹೊಂದಿ ಕೊಂಡಿದೆ. ಕೆಲವು ಆರ್ಥಿಕ ಚಟುವಟಿಕೆಗಳಿಗೆ ಅನುಮತಿಯೊಂದಿಗೆ ಲಾಕ್‌ಡೌನ್ ಅನ್ನು ಇನ್ನೊಂದು ವಾರ ವಿಸ್ತರಿಸಬೇಕು’ ಎಂದು ಉಪ ಮುಖ್ಯಮಂತ್ರಿ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಕೋರಿದರು.

ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಬೆಳಗಾವಿಯೂ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ನಡೆಸಿದ ವಿಡಿಯೊ ಸಂವಾದದಲ್ಲಿ ಮಾತನಾಡಿದರು.

‘ಆಟೊಮೊಬೈಲ್, ಕಟ್ಟಡ ನಿರ್ಮಾಣದಂತಹ ಪ್ರಮುಖ ಚಟುವಟಿಕೆಗಳಿಗೆ ಅವಕಾಶ ನೀಡುವ ಮೂಲಕ ಇನ್ನೊಂದು ವಾರ ಲಾಕಡೌನ್ ಮುಂದುವರಿಸಬೇಕು. ‘ಜಿಲ್ಲೆಯಲ್ಲಿ ಮುಂಗಾರು ಕೃಷಿ ಚಟುವಟಿಕೆ ಚುರುಕಿನಿಂದ ನಡೆದಿದೆ. ಜಿಲ್ಲಾ ಮಟ್ಟದಲ್ಲಿ ಪಡಿತರ ವಿತರಣೆ ಮತ್ತಿತರ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.

ಗಡಿ ಭಾಗದ ದೊಡ್ಡ ಜಿಲ್ಲೆ ಆಗಿರುವುದರಿಂದ ಪಾಸಿಟಿವಿಟಿ ದರ ನಿಯಂತ್ರಣಕ್ಕೆ ಇನ್ನೂ ಒಂದು ವಾರ ಲಾಕ್‌ಡೌನ್ ಮಾಡಿದರೆ ಮಾತ್ರ ಅನುಕೂಲ ವಾಗಲಿದೆ. ಆದ್ದರಿಂದ ಮುಂದುವರಿಸಬೇಕು’ ಎಂದು ಮುಖ್ಯಮಂತ್ರಿ ಮನವರಿಕೆಗೆ ಪ್ರಯತ್ನಿಸಿದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ‘ಜಿಲ್ಲೆಯಲ್ಲಿ ಐದು ತಾಲ್ಲೂಕುಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ 5ಕ್ಕಿಂತ ಕಡಿಮೆ ಇದೆ. ಇನ್ನುಳಿದ ತಾಲ್ಲೂಕುಗಳಲ್ಲಿ ಶೇ.10 ಹಾಗೂ ಅದಕ್ಕಿಂತಲೂ ಹೆಚ್ಚು ಪಾಸಿಟಿವಿಟಿ ದರ ಇದೆ. ಇನ್ನೊಂದು ವಾರ ಅವಕಾಶ ಸಿಕ್ಕರೆ ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆಗೊಳಿಸಲು ಅನುಕೂಲ ಆಗಲಿದೆ’ ಎಂದು ತಿಳಿಸಿದರು.

ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಲಾಕ್‌ಡೌನ್‌ ಎಷ್ಟು ದಿನ ಮುಂದುವರಿಸುವುದು? ಹೀಗೆ ಮುಂದುವರಿಸುತ್ತಾ ಹೋದರೆ ಆರ್ಥಿಕ ಪರಿಸ್ಥಿತಿ, ಜನಸಾಮಾನ್ಯರ ಪರಿಸ್ಥಿತಿ ಏನಾಗಲಿದೆ?’ ‘ಕೆಲವು ಕಡೆಗಳಲ್ಲಿ ಲಾಕ್‌ಡೌನ್ ಮುಂದುವರಿಸಿ, ಕೆಲವೆಡೆ ಅನ್‌ಲಾಕ್ ಮಾಡಿ ದರೆ ಎಲ್ಲ ಕಡೆ ಹರಡುವುದಿಲ್ಲವೇ’ ಎಂದೂ ಪ್ರಶ್ನಿಸಿದರು.

Leave a Reply

Your email address will not be published. Required fields are marked *