Tuesday, 13th May 2025

ಪ್ರಮಾಣವಚನ ಸ್ವೀಕರಿಸಿದ ಎ.ನಾರಾಯಣಸ್ವಾಮಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬುಧವಾರ ಕೇಂದ್ರ ಸಚಿವ ಸಂಪುಟ 2.0 ವಿಸ್ತರಣೆಯಾಗಿದೆ. ನೂತನ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ನೂತನ ಸಚಿವರಾಗಿ ಸಂಸದ ಎ.ನಾರಾಯಣಸ್ವಾಮಿ, ರಾಜೀವ್ ಚಂದ್ರಶೇಖರ್ ಹಾಗೂ ಶೋಭಾ ಕರಂದ್ಲಾಜೆ ಅವರು ಪ್ರಮಾಣವಚನ ಸ್ವೀಕರಿಸಿದರು.

ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟಕ್ಕೆ ನೂತನ ಸಚಿವರಾಗಿ 43 ಸಚಿವರು ಸೇರ್ಪಡೆ ಗೊಳ್ಳುತ್ತಿದ್ದಾರೆ. ಕರ್ನಾಟಕದಿಂದ ಸಂಸದ ರಾಜೀವ್ ಚಂದ್ರಶೇಖರ್ ಅವರಿಗೂ ಸ್ಥಾನ ದೊರೆತಿದೆ. ನೂತನ ಕೇಂದ್ರ ಸಚಿವರಾಗಿ ಸಂಸದ ಎ ನಾರಾಯಣಸ್ವಾಮಿ, ರಾಜೀವ್ ಚಂದ್ರಶೇಖರ್ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಕಾಶ್ ಜಾವಡೇಕರ್ ಮತ್ತು ರವಿಶಂಕರ್ ಪ್ರಸಾದ್ ರಾಜೀನಾಮೆಯಿಂದ ಈವರೆಗೆ ಒಟ್ಟು 12 ಸಚಿವರು ಮೋದಿ ಸಂಪುಟದಿಂದ ನಿರ್ಗಮಿಸಿದ್ದಾರೆ. ಆರೋಗ್ಯ ಕಾರಣಗಳಿಂದಾಗಿ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ತಮ್ಮ ಹುದ್ದೆಯಲ್ಲಿ ಮುಂದುವರಿಯಲು ಇಷ್ಟವಿಲ್ಲ ಎಂದು ವ್ಯಕ್ತಪಡಿಸಿದರು. ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಬುಧವಾರ ಕೇಂದ್ರ ಸಚಿವ ಸಂಪುಟದಿಂದ ನಿರ್ಗಮಿಸಿದರು.

ರಾಜೀನಾಮೆ ಸಲ್ಲಿಸಿದ 12 ಕೇಂದ್ರ ಸಚಿವರ ಪಟ್ಟಿ ಇಂತಿದೆ.

  • ಹರ್ಷವರ್ಧನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ
  • ಪ್ರಕಾಶ್ ಜಾವಡೇಕರ್, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ, ಮಾಹಿತಿ ಮತ್ತು ಪ್ರಸಾರ ಸಚಿವ ಮತ್ತು ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ
  • ರವಿ ಶಂಕರ್ ಪ್ರಸಾದ್, ಕಾನೂನು ಮತ್ತು ನ್ಯಾಯ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಸಚಿವ
  • ಸಂತೋಷ್ ಗಂಗ್ವಾರ್, ಕಾರ್ಮಿಕ ಸಚಿವ
  • ಸದಾನಂದ ಗೌಡ, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ
  • ಬಾಬುಲ್ ಸುಪ್ರಿಯೋ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ರಾಜ್ಯ ಸಚಿವ
  • ಸಂಜಯ್ ಧೋತ್ರೆ, ಶಿಕ್ಷಣ, ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ
  • ರಾವ್ ಸಾಹೇಬ್ ಪಾಟೀಲ್ ದಾನ್ವೆ, ರಾಜ್ಯ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಸಚಿವ
  • ರಟ್ಟನ್ ಲಾಲ್ ಕಟಾರಿಯಾ, ಜಲಶಕ್ತಿ ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ
  • ಪ್ರತಾಪ್ ಸಾರಂಗಿ, ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ರಾಜ್ಯ ಸಚಿವ ಮತ್ತು ಎಂಎಸ್ ಎಂಇ
  • ದೇಬಶ್ರೀ ಚೌಧುರಿ, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ರಾಜ್ಯ ಸಚಿವ
  • ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ

Leave a Reply

Your email address will not be published. Required fields are marked *