Thursday, 15th May 2025

ಪಟಾಕಿ ಅಂಗಡಿಯಲ್ಲಿ ಸ್ಫೋಟ: ಮಾಲೀಕನ ಸಾವು

ಚೆನ್ನೈ: ತಮಿಳುನಾಡಿನ ಕಲಾಕುರುಚ್ಚಿ ಜಿಲ್ಲೆಯ ಶಂಕರಾಪುರಂನ ಪಟಾಕಿ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದ್ದರಿಂದ ಕನಿಷ್ಠ 5 ಮಂದಿ ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿದ್ದಾರೆ.

ದೀಪಾವಳಿ ಹಿನ್ನೆಲೆಯಲ್ಲಿ ಸಂಗ್ರಹಿಸಲಾಗಿದ್ದ ಪಟಾಕಿಗಳು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಅಂಗಡಿ ಮಾಲೀಕ ಹಾಗೂ ಕೆಲಸಗಾರರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಘಟನೆಯಲ್ಲಿ ಗಾಯಗೊಂಡ 5 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಆಘಾತ ವ್ಯಕ್ತಪಡಿಸಿದ್ದು, ಮೃತ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿ ದ್ದಾರೆ.

Leave a Reply

Your email address will not be published. Required fields are marked *