Wednesday, 14th May 2025

ಕೇರಳದ ಹಲವು ರಸ್ತೆಗಳು ಜಲಾವೃತ: ಭಾರಿ ಮಳೆ, ಅಣೆಕಟ್ಟುಗಳ ನೀರಿನ ಮಟ್ಟ ಏರಿಕೆ

ಇಡಕ್ಕಿ, ಕೇರಳ: ಕೇರಳದ ಹಲವು ಭಾಗಗಳಲ್ಲಿ ಭಾನುವಾರ ಬೆಳಗಿನ ಹೊತ್ತಿಗೆ ಹಲವು ರಸ್ತೆಗಳು ಜಲಾವೃತವಾಗಿವೆ. ಶನಿವಾರ ರಾತ್ರಿಯಿಂದ ಭಾರಿ ಮಳೆಯಾಗುತ್ತಿದ್ದು, ಅನೇಕ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

ಮುಂದಿನ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಭಾಗಗಳಲ್ಲಿ ಇದೇ ಸ್ಥಿತಿ ಮುಂದು ವರೆಯಲಿದೆ. ಭಾನುವಾರ ಬೆಳಗಿನ ಹೊತ್ತಿಗೆ ಮುಲ್ಲಪೆರಿಯಾರ್ ಅಣೆಕಟ್ಟಿನ ನೀರಿನ ಮಟ್ಟ 140 ಅಡಿ ಮುಟ್ಟಿದೆ. ಮುಂದಿನ 24 ಗಂಟೆಗಳಲ್ಲಿ ನೀರಿನ ಮಟ್ಟ ಹೆಚ್ಚಾದರೆ ನೀರನ್ನು ಹೊರಬಿಡಬೇಕಾಗಬಹುದು.

ಪತ್ತನಂತಿಟ್ಟ ಜಿಲ್ಲೆಯಲ್ಲೂ ಭಾರಿ ಮಳೆಯಾಗಿದೆ. ನದಿಗಳಲ್ಲಿ ನೀರಿನ ಹರಿವು ಹೆಚ್ಚುವ ಸಾಧ್ಯತೆ ಇರುವುದರಿಂದ ನದಿಯ ತಟ ಗಳಲ್ಲಿ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವಾಸಿಸು ತ್ತಿರುವ ಜನರಿಗೆ ಸಂತ್ರಸ್ತ ಶಿಬಿರಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಪತ್ತನಂತಿಟ್ಟ ಮತ್ತು ಕೊಲ್ಲಂ ಜಿಲ್ಲೆಗಳಲ್ಲಿನ ರಸ್ತೆಗಳು ನೀರಿನಿಂದ ಆವೃತವಾಗಿವೆ. ಈ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸ ಲಾಗಿದೆ.

ಕೊಟ್ಟಾಯಂ ಜಿಲ್ಲೆಯಲ್ಲೂ ಉತ್ತಮ ಮಳೆಯಾಗಿದೆ. ನಿರಂತರ ಮಳೆಯಿಂದಾಗಿ ಶನಿವಾರ ಕೇರಳದ ಕೆಲವು ಭಾಗಗಳಲ್ಲಿ ಸಣ್ಣ ಭೂಕುಸಿತಗಳು ಮತ್ತು ರೈಲು ಸೇವೆಗಳಿಗೆ ಅಡ್ಡಿಯುಂಟಾಗಿದೆ. ಗುಡ್ಡಗಾಡು ಪ್ರದೇಶಗಳು, ನದಿಯ ಬದಿಗಳು ಮತ್ತು ಪ್ರವಾಸಿ ಕೇಂದ್ರಗಳಲ್ಲಿ ತೀವ್ರ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ರಾಜ್ಯದ ಕೆಲವೆಡೆ ನ.16 ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

Leave a Reply

Your email address will not be published. Required fields are marked *