Wednesday, 14th May 2025

ಜೇವರ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಇಂದು

Jewar Internatioal Airport

ನವದೆಹಲಿ: ಉತ್ತರ ಪ್ರದೇಶದ ಗೌತಮ್ ಬುದ್ಧನಗರದ ಜೇವರ್‌ನಲ್ಲಿ ಗುರುವಾರ ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಅವರು ನೋಯ್ಡಾ ಅಂತಾ Jewar International Airportರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

10,050 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ವಿಮಾನ ನಿಲ್ದಾಣದ ಮೊದಲ ಹಂತದ ಅಭಿವೃದ್ಧಿ ಮಾಡಲಾಗುತ್ತಿದೆ. 1300 ಹೆಕ್ಟೇರ್‌ಗಿಂತಲೂ ಹೆಚ್ಚು ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾ ಗಲಿದೆ. ಮೊದಲ ಹಂತದ ಏರ್ ಪೋರ್ಟ್ ಕೆಲಸವನ್ನು 2024 ರ ವೇಳೆಗೆ ಪೂರ್ಣಗೊಳಿಸಲು ನಿರ್ಧರಿಸ ಲಾಗಿದೆ.

‘ನಾಳೆ, ನವೆಂಬರ್ 25 ಭಾರತ ಮತ್ತು ಉತ್ತರ ಪ್ರದೇಶದ ಮೂಲಸೌಕರ್ಯ ಸೃಷ್ಟಿಗೆ ಪ್ರಮುಖ ದಿನ ವಾಗಿದೆ. ಮಧ್ಯಾಹ್ನ 1 ಗಂಟೆಗೆ, ನೋಯ್ಡಾ ಅಂತ ರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆ ನಡೆಯಲಿದೆ. ಈ ಯೋಜನೆಯು ವಾಣಿಜ್ಯ, ಸಂಪರ್ಕ ಮತ್ತು ಪ್ರವಾಸೋದ್ಯಮಕ್ಕೆ ಗಮನಾರ್ಹವಾಗಿ ಉತ್ತೇಜನ ನೀಡಲಿದೆ’ ಎಂದು ಪ್ರಧಾನಿ ಬುಧವಾರ ಟ್ವೀಟ್ ಮಾಡಿದ್ದಾರೆ.