Wednesday, 14th May 2025

ಕರೊನಾ ಸೋಂಕಿನ ಅಬ್ಬರ ಹೆಚ್ಚಳ: ನಾಳೆ ಸಿಎಂ ಸಭೆ

Basavaraj Bommai

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕರೋನಾ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಡಿಸೆಂಬರ್ 9 ರಂದು ಸಿಎಂ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯ ತಜ್ಞರು ಪಾಲ್ಗೊಳ್ಳಲಿದ್ದಾರೆ. ಶಾಲೆಗಳ ಕುರಿತು ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಯನ್ನು ಬದಲಾದ ಪರಿಸ್ಥಿತಿಗೆ ತಕ್ಕಂತೆ ಪರಿಷ್ಕರಣೆಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ರಾಜ್ಯದ 130 ಶಾಲಾ ಮಕ್ಕಳಿಗೆ ಕೊರನಾ ಸೋಂಕು ದೃಢಪಟ್ಟಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ.