Sunday, 11th May 2025

ಬಿಜೆಪಿ ಶಾಸಕಿ ಆಶಾ ಪಟೇಲ್ ಡೆಂಘೀಗೆ ನಿಧನ

Asha Patel

Asha Patelಅಹಮದಾಬಾದ್‌: ಆಸ್ಪತ್ರೆಯಲ್ಲಿ ಡೆಂಘೀಗೆ ಚಿಕಿತ್ಸೆ ಪಡೆಯುತ್ತಿದ್ದ ಗುಜರಾತ್‌ನ ಬಿಜೆಪಿ ಪಕ್ಷದ ಶಾಸಕಿ ಆಶಾ ಪಟೇಲ್ ಭಾನುವಾರ ನಿಧನರಾಗಿದ್ದಾರೆ.

ಮೆಹ್ಸಾನಾ ಜಿಲ್ಲೆಯ ಉಂಜಾ ವಿಧಾನಸಭಾ ಕ್ಷೇತ್ರದ 44 ವರ್ಷದ ಶಾಸಕಿ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ನಿಧನ ರಾಗಿದ್ದಾರೆ. ಕಳೆದ ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾಜಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್, ಶಾಸಕಿ ಆಶಾ ಪಟೇಲ್ ಅವರು ನಮ್ಮೊಂದಿಗಿಲ್ಲ. ಡೆಂಘೀ ಚಿಕಿತ್ಸೆಗಾಗಿ ಅಹಮದಾಬಾದ್‌ನ ಝೈಡಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಹೇಳಿದ್ದಾರೆ.

ಆಶಾ ಪಟೇಲ್ ನಿಧನಕ್ಕೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ರಾಜ್ಯಪಾಲ ಆಚಾರ್ಯ ದೇವವ್ರತ್ ಸಂತಾಪ ಸೂಚಿಸಿದ್ದಾರೆ.

ಮೊದಲು 2017ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಉಂಜಾದಿಂದ ಶಾಸಕರಾಗಿ ಆಯ್ಕೆಯಾದರು. ಆದರೆ ಫೆಬ್ರವರಿ 2019ರಲ್ಲಿ ಆಡಳಿತಾರೂಢ ಬಿಜೆಪಿಗೆ ಸೇರಿದ್ದು ನಂತರ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.