Thursday, 15th May 2025

ಡಿ.24- ಜನವರಿ 1 ರವರೆಗೆ ರಾಜ್ಯ ಹೈಕೋರ್ಟ್’ಗೆ ಚಳಿಗಾಲದ ರಜೆ

Karnataka High Court

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಡಿ.24 ರಿಂದ ಜನವರಿ 1 ರ ವರೆಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಆದೇಶದ ಅನುಸಾರ ನ್ಯಾಯಾಂಗ ರಿಜಿಸ್ಟ್ರಾರ್ ಕೆ.ಎಸ್. ಭರತ್ ಕುಮಾರ್ ನೋಟಿಫಿಕೇಶನ್ ಹೊರಡಿಸಿದ್ದಾರೆ.

ಡಿ.24 ರಿಂದ ಜನವರಿ 1 ರ ವರೆಗೆ ಹೈಕೋರ್ಟ್ ನ ಬೆಂಗಳೂರು ಪ್ರಧಾನ ಪೀಠ, ಕಲಬುರ್ಗಿ ಮತ್ತು ಧಾರವಾಡ ಪೀಠಗಳಿಗೆ ಚಳಿಗಾಲದ ರಜೆ ಇರುತ್ತದೆ.

ರಜೆ ಅವಧಿಯಲ್ಲಿ ದೈನಂದಿನ ಕಲಾಪಗಳು ನಡೆಯುವುದಿಲ್ಲ. ಡಿ.27 ರಂದು ಬೆಂಗಳೂರು ಪ್ರಧಾನ ಪೀಠದಲ್ಲಿ ರಜಾ ಕಾಲದ ನ್ಯಾಯಪೀಠಗಳು ನಡೆಯ ಲಿದ್ದು, ತುರ್ತು ಪ್ರಕರಣಗಳನ್ನು ವಿಚಾರಣೆಗೆ ಪರಿಗಣಿಸಲಾಗುತ್ತದೆ.

ಕಲಬುರ್ಗಿ ಮತ್ತು ಧಾರವಾಡದ ಹೈಕೋರ್ಟ್ ನ್ಯಾಯಪೀಠದಲ್ಲಿ ರಜಾ ಕಾಲದ ಪೀಠಗಳು ಕಾರ್ಯನಿರ್ವಹಿಸುವುದಿಲ್ಲ ಎಂದು ಹೇಳಲಾಗಿದೆ.