Tuesday, 13th May 2025

ಕೆಎಂಸಿ ಮತಗಟ್ಟೆ ಬಳಿ ಕಚ್ಚಾ ಬಾಂಬ್ ಸ್ಫೋಟ: ಮೂವರಿಗೆ ಗಾಯ

Kolkata Municipal Corporation

ಕೋಲ್ಕತ್ತಾ: ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್’ಗೆ ಭಾನುವಾರ ಚುನಾವಣೆ ನಡೆಯುತ್ತಿದ್ದು, ಕೆಲವೇ ಗಂಟೆಗಳಲ್ಲಿ ಕೋಲ್ಕತ್ತಾದ ಸೀಲ್ದಾಹ್ ಪ್ರದೇಶದ ಮತಗಟ್ಟೆಯ ಹೊರಗೆ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ.

ಮೂವರು ಮತದಾರರು ಗಾಯಗೊಂಡಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ಒಬ್ಬರು ಕಾಲು ಕಳೆದುಕೊಂಡಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

 

ಶಾಲೆಯ ಮುಂಭಾಗದಲ್ಲಿ ಬೆಳಗ್ಗೆ ಸ್ಫೋಟ ಸಂಭವಿಸಿದೆ. ಗಾಯಗೊಂಡ ಮೂವರು ವ್ಯಕ್ತಿಗಳು ಇದೇ ಕ್ಷೇತ್ರದ ಮತದಾರರು ಎಂದು ತಿಳಿಸಿದ್ದಾರೆ.

ದುಷ್ಕರ್ಮಿಗಳು ಎರಡು ಬಾಂಬ್‌ಗಳನ್ನು ಎಸೆದಿದ್ದು, ಅಪರಾಧಿಗಳನ್ನು ಗುರುತಿಸಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ರಾಜ್ಯ ಚುನಾವಣಾ ಆಯೋಗವು ಈ ಬಗ್ಗೆ ಪೊಲೀಸರಿಂದ ವರದಿ ಕೇಳಿದೆ.