Wednesday, 14th May 2025

ಹರ್ಯಾಣ: ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ನವದೆಹಲಿ: ಸೇನಾ ಹೆಲಿಕಾಪ್ಟರ್ ಭಾನುವಾರ ಹರ್ಯಾಣದ ಜಿಂದ್ ಜಿಲ್ಲೆಯ ಮೈದಾನದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವರದಿಯಾಗಿದೆ.

ನರ್ವಾನಾ ಪಟ್ಟಣದ ಜಜನ್‌ವಾಲಾ ಗ್ರಾಮದಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡುವಾಗ ನಾಲ್ವರು ಸೇನಾ ಸಿಬ್ಬಂದಿ ಹೆಲಿಕಾಪ್ಟರ್‌ ನಲ್ಲಿದ್ದರು. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

ಗ್ರಾಮಸ್ಥರು ಕುತೂಹಲದಿಂದ ಹೆಲಿಕಾಪ್ಟರ್ ನೋಡಲು ಸ್ಥಳದಲ್ಲಿ ಜಮಾಯಿಸಿದರು.