Friday, 16th May 2025

ಕೋವಿಡ್ ಬ್ರೇಕಿಂಗ್: 3,06,064 ಪ್ರಕರಣ ಪತ್ತೆ

covid

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿನ ಪ್ರಕರಣಗಳು ತಗ್ಗಿವೆ.

ಕಳೆದ 24 ಗಂಟೆಯಲ್ಲಿ 27,469ರಷ್ಟು ಕಡಿಮೆ ಸೋಂಕು ಪ್ರಕರಣಗಳು ದಾಖಲಾಗಿವೆ. ಕಳೆದ ಭಾನುವಾರ 3,06,064 ಪ್ರಕರಣಗಳು ಪತ್ತೆಯಾಗಿದ್ದು, ಕರೋನಾ ಮಹಾಮಾರಿಗೆ 439 ಜನ ಬಲಿಯಾಗಿದ್ದಾರೆ ಎಂದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಸೋಂಕಿನಿಂದ 2,43,495 ಜನ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 22,49,335 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಒಂದೇ ದಿನ 2,43,495 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದು ಸೇರಿದಂತೆ ಒಟ್ಟಾರೆ ಸೋಂಕಿನಿಂದ 3,68,04,145 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾ ಮೂರನೆ ಅಲೆ ವ್ಯಾಪಕವಾಗಿ ಹರಡುತ್ತಿದೆಯಾದರೂ ಅಪಾಯಕಾರಿಯಾಗಿಲ್ಲವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೂ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕೆಂದು ಸ್ಪಷ್ಟ ಸೂಚನೆ ರವಾನಿಸಿದ್ದಾರೆ.