Friday, 16th May 2025

2.09 ಲಕ್ಷ ಕೋವಿಡ್-19 ಪ್ರಕರಣ ದೃಢ

#corona

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ 2.09 ಲಕ್ಷ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, 959 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 2,62,628 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.

ದೇಶದಾದ್ಯಂತ ಈವರೆಗೆ 166 ಕೋಟಿಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಲಸಿಕಾ ಅಭಿಯಾನದಲ್ಲಿ ಇದು ಮಹತ್ವದ ಸಾಧನೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬಣ್ಣಿಸಿದ್ದರು. ದೇಶದ ನಾಗರಿಕರನ್ನು ಅಭಿನಂದಿಸಿದ್ದರು. ಅಲ್ಲದೆ, ಸುಮಾರು ನಾಲ್ಕೂವರೆ ಕೋಟಿ ಮಕ್ಕಳಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ನೀಡಲಾಗಿದ್ದು, ಹೆಮ್ಮೆಪಡುವ ವಿಷಯವಾಗಿದೆ ಎಂದು ಹೇಳಿದ್ದರು.