Wednesday, 14th May 2025

ಸ್ಪಾ ಸೆಂಟರ್‌ನಲ್ಲಿ ಬೆಂಕಿ ಅವಘಡ: ಇಬ್ಬರ ಸಜೀವ ದಹನ

ನೋಯ್ಡಾ: ನೋಯ್ಡಾದ ಸೆಕ್ಟರ್-24 ಪೊಲೀಸ್ ಠಾಣೆ ವ್ಯಾಪ್ತಿಯ ಸ್ಪಾ ಸೆಂಟರ್‌ನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಪಾ ಸೆಂಟರ್‌ನಲ್ಲಿದ್ದ ಇಬ್ಬರು ಮಹಿಳಾ ಉದ್ಯೋಗಿಗಳು ಸಜೀವ ದಹನವಾಗಿದ್ದಾರೆ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಬೆಂಕಿಯನ್ನ ಹತೋಟಿಗೆ ತಂದಿದ್ದಾರೆ.

ಮಾಹಿತಿಯ ಪ್ರಕಾರ, ನೋಯ್ಡಾ ಸೆಕ್ಟರ್-24 ಪೊಲೀಸ್ ಠಾಣೆ ವ್ಯಾಪ್ತಿ ಯಲ್ಲಿ ಸ್ಪಾ ಸೆಂಟರ್ ಇದೆ. ಗುರುವಾರ ಸಂಜೆ ಸುಮಾರಿಗೆ ಸ್ಪಾ ಕೇಂದ್ರದಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡ ನಂತರ ಸ್ಥಳದಲ್ಲಿ ಕೋಲಾಹಲ ಉಂಟಾಗಿದ್ದು, ಈ ಅಗ್ನಿ ಅವಘಡ ದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅದರಲ್ಲಿ ಒಬ್ಬರು ಹೆಣ್ಣು ಮತ್ತು ಒಬ್ಬರು ಗಂಡು ಎಂದು ತಿಳಿದು ಬಂದಿದೆ.