Wednesday, 14th May 2025

ಕಚ್ಚಾತೈಲ ಬ್ಯಾರೆಲ್‌ಗೆ 100 ಯುಎಸ್ ಡಾಲರ್

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ಏಳು ವರ್ಷಗಳ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 100 ಯುಎಸ್ ಡಾಲರ್ ಗಡಿ ದಾಟಿದೆ.

ದೇಶದ ಸರ್ಕಾರಿ ತೈಲ ಕಂಪನಿಗಳು ಶುಕ್ರವಾರ ಹೊಸ ದರಗಳನ್ನು ಬಿಡುಗಡೆ ಮಾಡಿದ್ದು, ಯಾವುದೇ ಬದಲಾ ವಣೆಗಳು ಕಂಡು ಬಂದಿಲ್ಲ. ದೇಶದ ಮಹಾ ನಗರಗಳಲ್ಲಿಯೂ ನವೆಂಬರ್​ 4ರಿಂದ ಇಂಧನ ದರ ಸ್ಥಿರವಾಗಿದೆ.

ಜಾರ್ಖಂಡ್​ ಸರ್ಕಾರ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ಬೆಲೆಯಲ್ಲಿ 25 ರೂ. ಕಡಿತಗೊಳಿಸಿದ ನಂತರ ಕಳೆದ ಜನವರಿ 26ರಿಂದ ಜಾರಿಗೆ ಬಂದಿದೆ.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿರುವುದರಿಂದ ಮುಂದಿನ ದಿನ ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ.

ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್​ಗೆ 101.46 ಯುಸ್ ಡಾಲರ್​ನಂತೆ ವ್ಯವಹಾರ ನಡೆಸುತ್ತಿದೆ. 2.38 ಡಾಲರ್ ಹೆಚ್ಚಳವಾಗಿದೆ. ಆದರೆ ಭಾರತದಲ್ಲಿ ನವೆಂಬರ್​ನಲ್ಲಿ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ.

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ.