Tuesday, 13th May 2025

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮುನ್ನಡೆ

ಲಕ್ನೋ: ಗುರುವಾರ ಉತ್ತರ ಪ್ರದೇಶದಲ್ಲಿ ನಡೆದ ಮತ ಎಣಿಕೆಯ ಆರಂಭಿಕ ಸುತ್ತಿನಲ್ಲಿ ಭಾರತೀಯ ಜನತಾ ಪಕ್ಷ ತನ್ನ ಪ್ರಮುಖ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷ (ಎಸ್‌ಪಿ) ಗಿಂತ ಮುನ್ನಡೆ ಸಾಧಿಸಿದೆ.

ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳಿಗೆ ನಡೆದ ಮತ ಎಣಿಕೆ ಬೆಳಗ್ಗೆ ಆರಂಭಗೊಂಡಿದ್ದು, ಆರಂಭಿಕ ಸುತ್ತಿನಲ್ಲಿ ಅಂಚೆ ಮತಪತ್ರಗಳನ್ನು ಎಣಿಸಲಾಗಿದೆ.

ಬಿಜೆಪಿ 250 ರಲ್ಲಿ ಮುನ್ನಡೆ ಸಾಧಿಸಿದ್ದರೆ, ಅಖಿಲೇಶ್ ಯಾದವ್ ನೇತೃತ್ವದ ಪಕ್ಷವು 111 ಸ್ಥಾನಗಳಲ್ಲಿ ಮುಂದಿದೆ. ಬಿಎಸ್‌ಪಿ ಒಂದು ಸೀಟಿನಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ ಮೂರರಲ್ಲಿ ಮುಂದಿದೆ.