Wednesday, 14th May 2025

ದಿಗಂತ್ ಖಾತೆಯಲ್ಲಿ ಹಣವಿಲ್ಲವಂತೆ

ದಿಗಂತ್ ಐಂದ್ರತಾ ರೆ ನಾಯಕ ಹಾಗೂ ನಾಯಕಿಯಾಗಿ ನಟಿಸಿರುವ, ಬಹು ನಿರೀಕ್ಷಿತ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಚಿತ್ರದ ಟ್ರೇಲರ್ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿದೆ.

ಬಿಡುಗಡೆಯಾದ ಕ್ಷಣದಿಂದಲೇ ಟ್ರೇಲರ್ ಸಾಕಷ್ಟು ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ನೊಡುಗರಿಂದ ಮೆಚ್ಚುಗೆಯ ಮಹಾ ಪೂರವೇ ಹರಿದು ಬರುತ್ತಿದೆ. ಏಪ್ರಿಲ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ವಿನಾಯಕ ಕೋಡ್ಸರ ನಿರ್ದೇಶಿಸಿರುವ ಈ ಚಿತ್ರವನ್ನು ಸಿಲ್ಕ್ ಮಂಜು ಅವರು ನಿರ್ಮಿಸಿದ್ದಾರೆ. ದಿಗಂತ್ ಈ ಚಿತ್ರದಲ್ಲಿ ವ್ಯಾಪಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಪ್ರಜ್ವಲ್ ಪೈ ಸಂಗೀತ ನಿರ್ದೇಶನ ಹಾಗೂ ನಂದಕಿಶೋರ್ ಛಾಯಾಗ್ರಹಣವಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ರಜನಿ ರಾಘವನ್ ಕಾಣಿಸಿ ಕೊಂಡಿದ್ದಾರೆ.