Thursday, 15th May 2025

1,259 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

#corona

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದೆ.

ಕಳೆದ 24 ಗಂಟೆಯಲ್ಲಿ 1,259 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 35 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಮೂಲಕ ಈವರೆಗೆ ಮೃತಪಟ್ಟವರ ಸಂಖ್ಯೆ 5,21,070ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 15,378 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,705 ಜನರು ಕೋವಿಡ್ ನಿಂದ ಗುಣಮುಖ ರಾಗಿದ್ದಾರೆ. ನಿನ್ನೆ 25,92,407 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,83,53,90,499 ಡೋಸ್ ಲಸಿಕೆ ಹಾಕಲಾಗಿದೆ.