Monday, 19th May 2025

ನಾಳೆ ‘ಪಂಚಾಯತಿ ರಾಜ್ ದಿವಸ್’: ಜಮ್ಮುವಿಗೆ ಪ್ರಧಾನಿ ಭೇಟಿ

ಜಮ್ಮು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಯನ್ನು ಬಲಪಡಿಸಲಾಗಿದೆ.

ನಾಳೆ ‘ಪಂಚಾಯತಿ ರಾಜ್ ದಿವಸ್’ನಲ್ಲಿ ದೇಶದಾದ್ಯಂತ ಪಂಚಾಯತ್‌ಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರತಿ ವರ್ಷ ಏ.24 ಅನ್ನು ರಾಷ್ಟ್ರೀಯ ಪಂಚಾಯತ್ ರಾಜ್ ದಿನ ವನ್ನಾಗಿ ಆಚರಿಸಲಾಗುತ್ತದೆ.

ಪ್ರಧಾನಮಂತ್ರಿಯವರು ಜಮ್ಮು ಮತ್ತು ಕಾಶ್ಮೀರದ 30,000ಕ್ಕೂ ಹೆಚ್ಚು ಪಂಚಾಯತ್ ರಾಜ್ ಸಂಸ್ಥೆಯ ಸದಸ್ಯರನ್ನು ಒಳಗೊಂಡಂತೆ ಸಭೆಯನ್ನು ಉದ್ದೇಶಿಸಿ ಮಾತನಾಡಲಿ ದ್ದಾರೆ.

ಎರಡು ದಿನಗಳ ಮೊದಲು ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕಂಜಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಇದರಲ್ಲಿ, ಓರ್ವ ಪೊಲೀಸ್ ಸೇರಿದಂತೆ ನಾಲ್ವರು ಯೋಧರು ಗಾಯಗೊಂಡಿದ್ದರು. ಈ ಹಿನ್ನೆಲೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತೆಯನ್ನು ಒದಗಿಸಲಾಗುತ್ತಿದೆ.