Wednesday, 14th May 2025

ಪಿಎಸ್‌ಐ ನೇಮಕಾತಿ ಪರೀಕ್ಷೆ ಪ್ರಕರಣ: ಮತ್ತೋರ್ವನ ಬಂಧನ

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಮಂಗಳವಾರ ಮತ್ತೊಬ್ಬ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ನಿವಾಸಿ ಎನ್.ವಿ.ಸುನೀಲ ಕುಮಾರ ಬಂಧಿತ. ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿಯೇ ಎಲೆಕ್ಟ್ರಾನಿಕ್ ಉಪಕರಣ ಬಳಸಿ ಪಾಸಾದ ಆರೋಪ ಇವರ ಮೇಲಿದೆ.

ಹಗರಣದಲ್ಲಿ ಬಂಧಿತರಾದ ರುದ್ರಗೌಡ ಡಿ. ಪಾಟೀಲ ಮುಖಾಂತರವೇ ಸುನೀಲ ಕುಮಾರ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಸಿಐಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಕ್ರಮಕ್ಕೆ ಸಂಬಂಧಿಸಿದಂತೆ ದಾಖಲೆಗಳ ಮರುಪರಿಶೀಲನೆಗೆ ಹಾಜರಾಗಲು ಸುನೀಲ ಕುಮಾರಗೆ ಬುಲಾವ್ ಬಂದಿತ್ತು. ಸೋಮ ವಾರ ಬೆಂಗಳೂರಿನ ಸಿಐಡಿ ಕಚೇರಿಗೆ ತೆರಳಿದ್ದರು. ಪರಿಶೀಲನೆ ವೇಳೆ ಅಕ್ರಮ ನಡೆದ ಸಂದೇಹ ಬಂದಿದ್ದು, ಆರೋಪಿಯನ್ನು ಅಧಿಕಾರಿಗಳು ಸ್ಥಳದಲ್ಲೇ ವಶಕ್ಕೆ ಪಡೆದರು.