Sunday, 11th May 2025

ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ದುರಂತ

ಲಕ್ನೋ: ಉತ್ತರ ಪ್ರದೇಶದ ಮೀರತ್‌ನ ಮಾವಾನಾದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿ ಕೊಂಡಿದೆ. ಇದುವರೆಗೆ ಯಾವುದೇ ಸಾವುನೋವು ಅಥವಾ ಗಾಯದ ವರದಿಯಾಗಿಲ್ಲ.

ಬೆಂಕಿಯನ್ನು ಹತೋಟಿಗೆ ತರಲು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿವೆ. ಸುದ್ದಿ ಸಂಸ್ಥೆ ಹಂಚಿಕೊಂಡ ವೀಡಿಯೊದಲ್ಲಿ, ಕಾರ್ಖಾನೆಯಿಂದ ಭಾರಿ ಹೊಗೆಯು ಹೊರಹೊಮ್ಮುತ್ತಿರುವುದನ್ನು ಕಾಣಬಹುದು.

ಬೇರೊಂದು ಘಟನೆಯಲ್ಲಿ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯ ಒಂದು ಭಾಗದಲ್ಲಿ ಬೆಂಕಿಯ ಘಟನೆ ವರದಿಯಾಗಿದೆ. ಆದಾಗ್ಯೂ, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿ ಸಿಲ್ಲ. ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಬೆಂಕಿ ಕಾಣಿಸಿಕೊಂಡ ವಾರ್ಡ್‌ಗಳಿಂದ 33 ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಐಎಎನ್‌ಎಸ್ ವರದಿ ಮಾಡಿದೆ.