Wednesday, 14th May 2025

ಬಸ್​ಗಳಿಗೆ ಏಕಾಏಕಿ ಬೆಂಕಿ ಹೊತ್ತಿ, ಓರ್ವ ಸಜೀವ ದಹನ

ಬಠಿಂಡಾ: ನಿಲ್ದಾಣದಲ್ಲಿ ನಿಂತಿದ್ದ ಬಸ್​ಗಳಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ಸಜೀವ ದಹನಗೊಂಡಿರುವ ಘಟನೆ ಪಂಜಾಬ್ ರಾಜ್ಯದ ಬಠಿಂಡಾದ ಭಾಯ್ ಕಾ ಬಸ್ ನಿಲ್ದಾಣದಲ್ಲಿ ನಡೆದಿದೆ.

ಭಗ್ತಾ ಭಾಯ್ ಕಾ ಬಸ್ ನಿಲ್ದಾಣದಲ್ಲಿ ಮೂರು ಬಸ್​​​ಗಳು ಬೆಂಕಿಗೆ ಆಹುತಿ ಯಾಗಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಸುದ್ದಿ ತಿಳಿ ಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಯನ್ನು ನಂದಿಸಿದ್ದಾರೆ. ಮೃತ ವ್ಯಕ್ತಿ ಬಸ್ ಕಂಡಕ್ಟರ್ ಆಗಿರಬಹುದು ಎಂದು ಹೇಳಲಾಗುತ್ತಿದೆ.

ಅಗ್ನಿ ದುರಂತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ವಶಕ್ಕೆ ಪಡೆದು, ಪರಿಶೀಲನೆ ಕೈಗೊಂಡಿದ್ದಾರೆ.