Friday, 16th May 2025

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸುಧಾಂಶು ಧೂಲಿಯಾ ಮತ್ತು ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಜಮ್‌ಶೆದ್‌ ಬಿ. ಪಾರ್ದೀವಾಲಾ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ಇದರೊಂದಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 34ಕ್ಕೆ ಏರಿಕೆಯಾಗಿದ್ದು, ಪೂರ್ಣ ಪ್ರಮಾಣದಲ್ಲಿ ನ್ಯಾಯ ಮೂರ್ತಿಗಳ ಹುದ್ದೆಗಳು ಭರ್ತಿಯಾಗಿವೆ. ಈ ವರ್ಷದ ಜನವರಿ 4ರಂದು ನ್ಯಾ.ಆರ್.ಸುಭಾಷ್ ರೆಡ್ಡಿ ಅವರ ನಿವೃತ್ತಿಯಿಂದ ನ್ಯಾಯಮೂರ್ತಿಗಳ ಸಂಖ್ಯೆ 32ಕ್ಕೆ ಇಳಿದಿತ್ತು.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು, ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.