Wednesday, 14th May 2025

ಸಿಲಿಂಡರ್ ಸ್ಫೋಟಕ್ಕೆ ಮನೆ ಗೋಡೆ ಕುಸಿತ: ನಾಲ್ವರ ಸಾವು

ಹೈದರಾಬಾದ್: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮನೆವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ  ಕುಸಿದು ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಬೆಳಗ್ಗೆ ಅನಂತಪುರದ ಮುಳಕಲೇಡು ಗ್ರಾಮದ ನಿವಾಸದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ಪರಿಣಾಮ ಅಕ್ಕಪಕ್ಕದ ಮನೆಯ ಗೋಡೆ ಕುಸಿದು ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿ ದ್ದಾರೆ ಎಂದು ಅನಂತಪುರದ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಫಕೀರಪ್ಪ ತಿಳಿಸಿ ದ್ದಾರೆ.