Tuesday, 13th May 2025

ಉಗ್ರರ ದಾಳಿಗೆ ಹಿಂದೂ ಶಿಕ್ಷಕಿ ಬಲಿ

ಶ್ರೀನಗರ: ಭಯೋತ್ಪಾದಕರ ದಾಳಿಗೆ ಹಿಂದೂ ಶಿಕ್ಷಕಿಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಶಾಲಾ ಶಿಕ್ಷಕಿ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

ಮಂಗಳವಾರ ಕುಲ್ಗಾಮ್ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತ್ ಶಿಕ್ಷಕಿಯನ್ನು ಕೆಲವು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಶಿಕ್ಷಕಿ ಮೃತಪಟ್ಟಿದ್ದಾರೆ.

ದಾಳಿಯ ನಂತರ, ದಾಳಿಕೋರರನ್ನು ಹಿಡಿಯಲು ಇಡೀ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದಾರೆ. ಆದರೆ ಭಯೋತ್ಪಾದ ಕರು ಇನ್ನೂ ಗುರುತಿಸಲ್ಪಟ್ಟಿಲ್ಲ. ಆದರೆ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲ್ಪೋರಾ ಪ್ರದೇಶಕ್ಕೆ ಸೇರಿದವರು ಎಂದು ಹೇಳಲಾಗುತ್ತಿದೆ.