Wednesday, 14th May 2025

ಎರಡು ಪ್ರತ್ಯೇಕ ರಸ್ತೆ ಅಪಘಾತ: ಏಳು ಮಂದಿ ಸಾವು, 15 ಜನರಿಗೆ ಗಾಯ

ಖಾಂಡ್ವಾ/ಸಿಂಗ್ರೌಲಿ: ಮಧ್ಯಪ್ರದೇಶದ ಖಾಂಡ್ವಾ ಮತ್ತು ಸಿಂಗ್ರೌಲಿ ಜಿಲ್ಲೆ ಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಮಹಿಳೆಯರು ಮತ್ತು ಮಕ್ಕಳು ಸೇರಿ, ಏಳು ಮಂದಿ ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿದ್ದಾರೆ.

ಖಾಂಡ್ವಾದಲ್ಲಿ ಶುಕ್ರವಾರ ರಾತ್ರಿ ರೋಶನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಖಿರ್ಕಿಯಾ-ಖಲ್ವಾ ರಸ್ತೆಯ ಧನೋರಾ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ. ಆರು ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಖಾಂಡ್ವಾ ಜಿಲ್ಲಾ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹರ್ಸೂಡ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮೇಧಾಪಾಣಿ ಗ್ರಾಮಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಸುಮಾರು 35 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗುತ್ತಿದೆ.

ಅಮ್ರಾಹ್ವಾ ಗ್ರಾಮದ ಬಳಿ ಟ್ರಕ್‌ಗೆ ಮೋಟಾರ್‌ಸೈಕಲ್ ಡಿಕ್ಕಿ ಹೊಡೆದು ಓರ್ವ ವ್ಯಕ್ತಿ ಮತ್ತು ಬಾಲಕ ಮೃತಪಟ್ಟಿದ್ದಾರೆ. ಪಿಲಿಯನ್ ಸವಾರಿ ಮಾಡುತ್ತಿದ್ದ ಬಾಲಕನ ತಾಯಿ ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.