Sunday, 11th May 2025

ಶತಾಯುಷಿ ಸಾಲುಮರದ ತಿಮ್ಮಕ್ಕನವರಿಗೆ ಬಿಡಿಎ ನಿವೇಶನ

ಬೆಂಗಳೂರು: ರಾಜ್ಯ ಸರಕಾರದ ವತಿಯಿಂದ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಉಚಿತವಾಗಿ ಬಿಡಿಎ ನಿವೇಶನ ಹಸ್ತಾಂತರಿಸಲಾಯಿತು.

ಬೆಂಗಳೂರಿನಲ್ಲಿ ಬುಧವಾರ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್ ಗೌಡ ನಿವೇಶನದ ನೋಂದಣಿ ಪತ್ರವನ್ನು ಸಾಲುಮರದ ತಿಮ್ಮಕ್ಕ ಅವರಿಗೆ ಹಸ್ತಾಂತರಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಬುಧವಾರ ಕೆಂಪೇ ಗೌಡ ಬಡಾವಣೆಯ 7 ನೇ ಬ್ಲಾಕ್‌ನಲ್ಲಿರುವ 50×80 ಅಳತೆಯ ನಿವೇಶನದ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಲಾಯಿತು. ನಂತರ ಬಿಡಿಎ ಅಧ್ಯಕ್ಷರು ಮತ್ತು ಆಯುಕ್ತರು ತಿಮ್ಮಕ್ಕ ಅವರನ್ನು ಸನ್ಮಾನಿಸಿ ನಿವೇಶನದ ನೋಂದಣಿ ಪತ್ರವನ್ನು ವಿತರಿಸಿದರು.

ಸಾಲುಮರದ ತಿಮ್ಮಕ್ಕ ಮಾತನಾಡಿ, ನನಗೆ ಬಿಡಿಎ ವತಿಯಿಂದ ನಿವೇಶನ ನೀಡಿರುವು ದಕ್ಕೆ ಸಂತಸವಾಗುತ್ತಿದೆ. ಎಲ್ಲರೂ ಪರಿಸರ ರಕ್ಷಣೆಯತ್ತ ಕಾಳಜಿ ವಹಿಸಬೇಕು ಮತ್ತು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರಲ್ಲಿ ಪರಿಸರ ಕಾಳಜಿ ಮೂಡುವಂತೆ ಮಾಡ ಬೇಕೆಂದು ಹಾರೈಸಿದರು.

ಇದೇ ವೇಳೆ ಮಾತನಾಡಿದ ವಿಶ್ವನಾಥ್ ಅವರು, ಬಿಡಿಎ ವತಿಯಿಂದ ನಮ್ಮೆಲ್ಲರ ಮಾರ್ಗದರ್ಶಿಯಾಗಿರುವ ಸಾಲುಮರದ ತಿಮ್ಮಕ್ಕ ಅವರಿಗೆ ನಿವೇಶನ ನೀಡಿರುವುದು ಸಂತಸ ತಂದಿದೆ ಎಂದರು.