Thursday, 15th May 2025

ಆಟೋ ಮೇಲೆ ಬಿದ್ದ ಹೈ ಟೆನ್ಷನ್ ತಂತಿ: ಎಂಟು ಕಾರ್ಮಿಕರ ಸಾವು

ಹೈದರಾಬಾದ್: ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಚಿಲ್ಲಕೊಂಡಪಲ್ಲಿ ಗ್ರಾಮದಲ್ಲಿ ಹೈ ಟೆನ್ಷನ್ ತಂತಿ ಆಟೋ ರಿಕ್ಷಾದ ಮೇಲೆ ಬಿದ್ದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಎಂಟು ಕಾರ್ಮಿಕರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ.

ಗುಡಂಪಲ್ಲಿಯಿಂದ ಆಟೋದಲ್ಲಿ ಕಾರ್ಮಿಕರು ಕೆಲಸಕ್ಕೆಂದು ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ. ಗಾಯಾಳು ಗಳನ್ನು ಆಸ್ಪತ್ರೆ ರವಾನಿಸ ಲಾಗಿದ್ದು, ಇಬ್ಬರು ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗುತ್ತಿದೆ.

ಮೃತರಿಗೆ ಆಂಧ್ರ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿ ಸಂತಾಪ ಸೂಚಿ ಸಿದ್ದು, ಮೃತ ಕುಟುಂಬಕ್ಕೆ 10 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಆಂಧ್ರಪ್ರದೇಶದ ರಾಜ್ಯಪಾಲ ಬಿಸ್ವ ಭೂಷಣ ಹರಿಚಂದನ್ ಅವರು ಮೃತರ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸಿದ್ದಾರೆ.

ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಏಲೂರು ಜಿಲ್ಲೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗು ತ್ತಿದ್ದಾಗ ಹೈಟೆನ್ಷನ್ ತಂತಿಯ ಮೇಲೆ ಬಿದ್ದ ಪರಿಣಾಮ ಇಬ್ಬರು ಸಹೋದರರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದರು.