Monday, 12th May 2025

ಮುಲಾಯಂ ಸಿಂಗ್ ಪತ್ನಿ ನಿಧನ

ಲಖನೌ: ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ ಸಾಧನಾ ಗುಪ್ತಾ ಶನಿವಾರ ನಿಧನರಾದರು.

ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು ಮತ್ತು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಾಧನಾ ಗುಪ್ತಾ ಅವರು ಬಿಜೆಪಿ ನಾಯಕಿ ಅಪರ್ಣಾ ಯಾದವ್ ಅವರ ಅತ್ತೆ ಮತ್ತು ಪ್ರತೀಕ್ ಯಾದವ್ ಅವರ ತಾಯಿ.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ, ಸ್ಥಿತಿ ಚಿಂತಾಜನಕವಾಗಿತ್ತು. ಕಳೆದ ನಾಲ್ಕು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿತ್ತು.