Saturday, 10th May 2025

ಖಾಸಗಿ ನೌಕರರ ನಿವೃತ್ತಿ ವಯಸ್ಸು 60 ವರ್ಷಕ್ಕೆ ಏರಿಕೆ

ಧಾರವಾಡ: ಖಾಸಗಿ ವಲಯದ ನೌಕರರ ನಿವೃತ್ತಿಯ ವಯಸ್ಸನ್ನು 58 ವರ್ಷದಿಂದ 60 ವರ್ಷಕ್ಕೆ ಏರಿಸಬೇಕು ಎಂಬ ಸರ್ಕಾರದ ಆದೇಶವನ್ನು ಧಾರವಾಡ ಹೈಕೋರ್ಟ್ ನ್ಯಾಯ ಪೀಠವು ಎತ್ತಿ ಹಿಡಿದಿದೆ.

ಕರ್ನಾಟಕ ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶಗಳ ತಿದ್ದುಪಡಿ ನಿಯಮಗಳ ಮಾದರಿ ಅನ್ವಯ ನೌಕರರ ನಿವೃತ್ತಿ ವಯಸ್ಸು ಏರಿಸಿ, ಸರ್ಕಾರ ಆದೇಶಿಸಿತ್ತು. ರಾಜ್ಯ ಸರ್ಕಾರದ ಆದೇಶವನ್ನು ಹರಿಹರದ ಗ್ರಾಸಿಂ ಇಂಡಸ್ಟ್ರೀಸ್ ಕಂಪನಿಯು ಪ್ರಶ್ನಿಸಿ, ಹೈಕೋರ್ಟ್ ಮೊರೆ ಹೋಗಿತ್ತು.

ಕಂಪನಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠವು 2021, ಸೆಪ್ಟೆಂಬರ್ 17ರಂದು ವಜಾಗೊಳಿಸಿತ್ತು. ಈ ವಜಾ ಆದೇಶವನ್ನು ಪ್ರಶ್ನಿಸಿ ಮತ್ತೆ ಮೇಲ್ಮನವಿ ಸಲ್ಲಿಸ ಲಾಗಿತ್ತು. ಈ ಸಂಬಂಧದ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ.