Sunday, 11th May 2025

ಇನ್ನೂ ನಾಲ್ಕು ದಿನ ಮಳೆ: ಕರಾವಳಿಯಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಮುಖವಾಗಿ, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಗಳ ಕಾಲ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸ ಲಾಗಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಹಾಸನ ಸೇರಿದಂತೆ ಪಶ್ಚಿಮಘಟ್ಟ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕರ್ನಾಟಕದ ಕಲಬುರ್ಗಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ತಿಳಿಸಿದೆ.