Wednesday, 14th May 2025

ನಟ, ನಿರ್ಮಾಪಕ ವಿರೇಂದ್ರ ಬಾಬು ಬಂಧನ

ಬೆಂಗಳೂರು : ವಂಚನೆ ಪ್ರಕರಣ ಸಂಬಂಧ ನಟ, ನಿರ್ಮಾಪಕ ವಿರೇಂದ್ರ ಬಾಬು ಅವರನ್ನು ಬಂಧಿಸಲಾಗಿದೆ.

ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸರು ವಿರೇಂದ್ರ ಬಾಬು ಬಂಧಿಸಿದ್ದಾರೆ. ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ಆರೋಪಿ ವಿರೇಂದ್ರ ಬಾಬು, ಚುನಾವಣೆ ಟಿಕೆಟ್ ಕೊಡುವುದಾಗಿ ನಂಬಿಸಿ ಬಸವರಾಜ್ ಘೋಷಾಲ್ ಎಂಬವರಿಗೆ 1.88 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ವಿರೇಂದ್ರ ಬಾಬು ವಿರುದ್ಧ ಬಸವರಾಜ ಘೋಷಾಲ್ ಎಂಬುವರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಕೊಡಿಗೆಹಳ್ಳಿ ಪೊಲೀಸರು ವಿರೇಂದ್ರ ಬಾಬುವನ್ನು ವಶಕ್ಕೆ ಪಡೆದಿದ್ದಾರೆ.