Tuesday, 13th May 2025

ಭಾರೀ ಮಳೆಗೆ ಛಾವಣಿ ಕುಸಿತ: ಐವರು ಮಹಿಳೆಯರ ಸಾವು

ಸಾಹಿವಾಲ್: ಪಾಕಿಸ್ತಾನದ ಸಾಹಿವಾಲ್‌ನಲ್ಲಿ ಸುರಿದ ಭಾರೀ ಮಳೆಗೆ ಛಾವಣಿ ಕುಸಿದು ಐವರು ಮಹಿಳೆಯರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ.

ಮನೆ ಛಾವಣಿ ಕುಸಿತದ ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಪಡೆ ಮತ್ತು ರಕ್ಷಣಾ ಸಂಸ್ಥೆಗಳ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದವು.

ಈ ವೇಳೆ ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಇನ್ನೂ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಂಧ್‌ನ ಖೈರ್‌ಪುರ್ ಜಿಲ್ಲೆಯಲ್ಲಿ ಮತ್ತೊಂದು ಘಟನೆ ನಡೆದಿದ್ದು, ಛಾವಣಿ ಕುಸಿತದಿಂದ ಒಂದೇ ಕುಟುಂಬದ ವ್ಯಕ್ತಿ ಹಾಗೂ ಅವರ ಇಬ್ಬರು ಅಪ್ರಾಪ್ತ ಪುತ್ರರು ಮೃತಪಟ್ಟಿದ್ದರೆ, ಇಬ್ಬರು ಪುತ್ರಿಯರು ತೀವ್ರವಾಗಿ ಗಾಯಗೊಂಡಿದ್ದಾರೆ.