Sunday, 11th May 2025

ಪುಣೆ ಪ್ರವಾಸ ಕೈಗೊಂಡ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಧ ಕಾರ್ಯಕ್ರಮ ಗಳಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಮಹಾರಾಷ್ಟ್ರದ ಪುಣೆ ಪ್ರವಾಸ ಕೈಗೊಂಡಿ ದ್ದಾರೆ.

ಶನಿವಾರ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ಪುಣೆಗೆ ಸಿಎಂ ಬಸವರಾಜ ಬೊಮ್ಮಾಯಿ‌ ತೆರಳಿದರು.

ಪುಣೆಯಲ್ಲಿ ಬಂಟರ ಸಂಘದಿಂದ ಆಯೋಜಿಸಲಾಗಿರುವ ಸೇವಾಸಾಧಕರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಾಗೂ ಅಖಿಲ ಭಾರತ ಬ್ರಾಹ್ಮಣ ಮಹಾಸಂಘದ ಕಾರ್ಯ ಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಸಂಜೆ ಪುಣೆಯಿಂದ ಬೆಂಗಳೂರಿಗೆ ವಿಶೇಷ ವಿಮಾನದ ಮೂಲಕ ಮರಳಲಿದ್ದಾರೆ.