Wednesday, 14th May 2025

ಉಗ್ರರ ವಿರುದ್ಧ ಕಾರ್ಯಾಚರಣೆ: ಮತ್ತೆ ಇಬ್ಬರ ಹತ್ಯೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಭಾರತೀಯ ಸೇನೆ ಗುರುವಾರ ಮತ್ತೆ ಇಬ್ಬರು ಉಗ್ರರನ್ನು ಹೊಡೆದುರು ಳಿಸಿದೆ.

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಬೊಮೈ ಸೋಪೋರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕ ರನ್ನು ಹೊಡೆದುರುಳಿಸಿರುವುದಾಗಿ ಕಾಶ್ಮೀರ ಪೊಲೀಸರು ಹೇಳಿದ್ದಾರೆ.

“ಸೋಪೋರ್‌ನ ಬೊಮೈ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದ್ದು, ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ನಿರತವಾಗಿವೆ. ಪ್ರಸ್ತುತ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ರಾಜ್ಯದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ನಿರಂತರವಾಗಿದ್ದು, ಕಳೆದ 48 ಗಂಟೆಗಳಲ್ಲಿ 5 ಮಂದಿ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.