Sunday, 11th May 2025

ಸಚಿವ ಕತ್ತಿ ನಿಧನ: ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ

ಬೆಂಗಳೂರು: ಸಚಿವ ಉಮೇಶ್ ಕತ್ತಿ ನಿಧನರಾದ ಹಿನ್ನಲೆಯಲ್ಲಿ, ನಾಳೆ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದಿಂದ ದೊಡ್ಡಬಳ್ಳಾಪುರದಲ್ಲಿ ನಾಳೆಯ ಬಿಜೆಪಿ ಜನೋತ್ಸವ ಕಾರ್ಯ ಕ್ರಮ ಆಯೋಜಿಸ ಲಾಗಿತ್ತು.

ನಮ್ಮ ಸಂಪುಟದ ಸಹೋದ್ಯೋಗಿ ಅರಣ್ಯ ಸಚಿವ ಉಮೇಶ್ ಕತ್ತಿಯವರು ಕಳೆದ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಂತಿಮ ಸಂಸ್ಕಾರಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಬಿಜೆಪಿ ಪಕ್ಷದಿಂದ ದೊಡ್ಡಬಳ್ಳಾಪುರ ದಲ್ಲಿ ಆಯೋಜಿಸಿದ್ದ ಜನೋತ್ಸವ ಕಾರ್ಯಕ್ರಮವನ್ನು ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಸಚಿವ ಉಮೇಶ್ ಕತ್ತಿ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದಿಂದ ಮೂರು ದಿನಗಳ ಕಾಲ ರಾಜ್ಯಾಧ್ಯಂತ ಶೋಕಾಚರಣೆ ಘೋಷಣೆ ಮಾಡಲಾಗಿದೆ.