Thursday, 15th May 2025

ಪೂಂಚ್‌ನಲ್ಲಿ ಕಮರಿಗೆ ಬಿದ್ದ ಬಸ್: 7 ಮಂದಿ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಪೂಂಚ್‌ನಲ್ಲಿ ಬಸ್ ಕಮರಿಗೆ ಬಿದ್ದು 7 ಮಂದಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ 8 ಮಂದಿ ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬರೇರಿ ನಾಲಾ ಬಳಿ ಪ್ರಯಾಣಿಸುತ್ತಿದ್ದ ಬಸ್ ಇದ್ದಕ್ಕಿದ್ದಂತೆ ಆಳವಾದ ಕಮರಿಗೆ ಬಿದ್ದದೆ.

ಇದರ ಪರಿಣಾಮ ಬಸ್ಸಿನಲ್ಲಿದ್ದ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ.

ಬಸ್ ಸೌಜಿಯಾನ್‌ನಿಂದ ಮಂಡಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಘಟನೆ ನಡೆದ ಕೂಡಲೇ ಸ್ಥಳೀಯರು, ಪೊಲೀಸರು ಮತ್ತು ಸೇನೆಯಿಂದ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್‌ ಚಾಲಕ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಆದರೂ ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಬಸ್ಸಿನಲ್ಲಿದ್ದವರನ್ನು ತಕ್ಷಣ ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ ಕಮರಿಗೆ ಬಿದ್ದ ಬಸ್ ನ ಗಾಜುಗಳು ಒಡೆದುಹೋಗಿದೆ.